ಕೊನೆಗೂ ಕಮಲ ಮುಡಿದ ಕೊಳ್ಳೇಗಾಲ ಶಾಸಕ ಎನ್.ಮಹೇಶ್! | ಮಾಜಿ, ಹಾಲಿ ಸಿಎಂ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ
ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರು ಗುರುವಾರ ಅಧಿಕೃತವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಇಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಬಿಜೆಪಿ ಬಾವುಟವನ್ನು ಹಸ್ತಾಂತರಿಸುವ ಮೂಲಕ ಬಿಜೆಪಿಗೆ ಬರ ಮಾಡಿಕೊಂಡರು.
2018ರ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಎನ್.ಮಹೇಶ್ ಅವರು, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಎಸ್ ಪಿಯಿಂದ ಉಚ್ಛಾಟನೆಗೊಂಡಿದ್ದರು. ಆ ಬಳಿಕ ಅವರು ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಇನ್ನಷ್ಟು ಸುದ್ದಿಗಳು…
“ಓ ಲಾರ್ಡ್ ಜೀಸಸ್, ಪ್ಲೀಸ್ ಹೆಲ್ಪ್ ಮೀ” ಎಂದು ಎನ್.ಮಹೇಶ್ ಬೇಡುತ್ತಿರುವ ವಿಡಿಯೋ ವೈರಲ್
“ಕಸವು ಕಸದ ಬುಟ್ಟಿಗೆ ಸೇರಿತು” | ಎನ್.ಮಹೇಶ್ ಬಿಜೆಪಿ ಸೇರ್ಪಡೆ ಹಿನ್ನೆಲೆ ಪರ-ವಿರೋಧ ಚರ್ಚೆ!
ದಲಿತರನ್ನು ಅಧಿಕಾರದಿಂದ ವಂಚಿಸುವ ಪ್ರಕ್ರಿಯೆ ರಾಜ್ಯದಲ್ಲಿ ಆರಂಭವಾಗಿದೆ | ಎನ್.ಮಹೇಶ್ ಆಕ್ರೋಶ
ಬಿಜೆಪಿಯಲ್ಲಿ ದಲಿತ ಸಿಎಂ ಬಗ್ಗೆ ಧ್ವನಿಯೆತ್ತಿ ಎನ್.ಮಹೇಶ್ ತಾಕತ್ತು ಪ್ರದರ್ಶಿಸಲಿ | ಮಾಜಿ ಶಾಸಕ ಬಾಲರಾಜ್ ಕಿಡಿ