ಕೊಪ್ಪಳದಲ್ಲಿ ಬೆತ್ತಲೆ ಪೂಜೆ ಪ್ರಕರಣ: ಓರ್ವನ ಬಂಧನ, ಇಬ್ಬರು ಪೊಲೀಸ್ ವಶಕ್ಕೆ - Mahanayaka

ಕೊಪ್ಪಳದಲ್ಲಿ ಬೆತ್ತಲೆ ಪೂಜೆ ಪ್ರಕರಣ: ಓರ್ವನ ಬಂಧನ, ಇಬ್ಬರು ಪೊಲೀಸ್ ವಶಕ್ಕೆ

koppala
04/10/2022

ಕೊಪ್ಪಳ: ಬಾಲಕನನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಓರ್ವನನ್ನು  ಬಂಧಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


Provided by

ಬಂಧನಕ್ಕೊಳಗಾಗಿರುವ ಶರಣಪ್ಪ ತಳವಾರ ಎಂಬಾತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದಂತೆ ವಿರೂಪನಗೌಡ ಸಿದ್ದನಗೌಡ್ರ ಹಾಗೂ ಶರಣ್ಪ ಓಜನಹಳ್ಳಿ ಎಂಬಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಅಪ್ಪನ ಸಾಲ ತೀರಬೇಕು,  ಕೈ ತುಂಬಾ ಹಣ ಮಾಡಬೇಕಂದ್ರೆ ಬೆತ್ತಲೆ ಪೂಜೆ ಮಾಡಬೇಕು ಎಂದು ಗ್ರಾಮದ ಕೆಲವರು ಬಾಲಕನನ್ನು ಬೆತ್ತಲೆ ಪೂಜೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಬಡತನದ ಬೇಗೆಯಲ್ಲಿ ಬೇಯುತ್ತಿದ್ದ ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮದ ಬಾಲಕನಿಗೆ ಬೆತ್ತಲೆ ಪೂಜೆ ಮಾಡಿಸಿರುವುದೇ ಅಲ್ಲದೇ ಆತನ ಬೆತ್ತಲೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ವಿಕೃತಿ ಮೆರೆಯಲಾಗಿದೆ.


Provided by

ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಾಲಕ ಮತ್ತು ಕುಟುಂಬಸ್ಥರು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಾಲಕನ ಬಡತನದ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ವಿಕೃತಿ ಮೆರೆದ ಆರೋಪಿಗಳ ವಿರುದ್ಧ ದೂರು ದಾಖಲಾಗಿದ್ದು, ಇದೀಗ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ