ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಯುವಕ!
ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವಕನೋರ್ವ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದೇ ಅಲ್ಲದೇ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಿಗೇರಿ ಗ್ರಾಮದಲ್ಲಿ ನಡೆದಿದೆ.
ಪ್ರಕಾಶ ಭಜಂತ್ರಿ ಎಂಬಾತ ಸುಮಾ ಎಂಬ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಪ್ರಕಾಶ ತನ್ನನ್ನು ಪ್ರೀತಿಸುವಂತೆ ಹೇಳಿದ್ದಾನೆ. ಯುವತಿ ಪ್ರೀತಿಗೆ ನಿರಾಕರಿಸಿದಾಗ ಚಾಕುವಿನಿಂದ ಮನಬಂದಂತೆ ಚುಚ್ಚಿ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇವರಿಬ್ಬರ ಜಾತಿ ಬೇರೆ ಬೇರೆಯಾಗಿತ್ತು ಎನ್ನಲಾಗಿದೆ ಇದೇ ಕಾರಣಕ್ಕಾಗಿ ಸುಮಾ ಪ್ರಕಾಶನ ಪ್ರೀತಿ ಒಪ್ಪಿರಲಿಲ್ಲ ಎನ್ನಲಾಗಿದೆ. ಈ ವಿಚಾರ ಗ್ರಾಮದಲ್ಲಿ ಹೆಚ್ಚಿನವರಿಗೆ ತಿಳಿದಿದೆ ಎನ್ನಲಾಗಿದೆ. ಆದರೆ, ಇದೀಗ ವನ್ ಸೈಡ್ ಲವ್ ಸ್ಟೋರಿ ದುರಂತ ಅಂತ್ಯಕಂಡಿದೆ.
ಘಟನೆಗೆ ಸಂಬಂಧಿಸಿದಂತೆ ಕುಕನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಪೊಲೀಸರ ತನಿಖೆಯಿಂದ ಘಟನೆಯ ಸತ್ಯಾಸತ್ಯತೆ ತಿಳಿದು ಬರಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw