ಉಡುಪಿ–ಚಿಕ್ಕಮಗಳೂರು: ಸತತ ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ
![kota srinevas](https://www.mahanayaka.in/wp-content/uploads/2024/06/kota-srinevas.jpg)
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು 5ನೇ ಹಂತದ ಮತ ಎಣಿಕೆ ಪ್ರಕ್ರಿಯೆ ವೇಳೆಯೂ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರು 2,30,610 ಮತಗಳನ್ನು, ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಅವರು 1,41,698 ಮತಗಳನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಅವರು 88,912 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವು ಚಿಕ್ಕಮಗಳೂರಿನ ತರೀಕೆರೆ, ಶೃಂಗೇರಿ, ಮೂಡಿಗೆರೆ ಹಾಗೂ ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ ಕಾಪು, ಕಾರ್ಕಳ ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068