ಕೋಟಿಗೊಬ್ಬ-3 ಬಿಡುಗಡೆಗೆ ಯಾರಿಂದ ತೊಂದರೆ ಆಯ್ತು ಅಂತ ಗೊತ್ತಿದೆ | ವಿಡಿಯೋ ಶೇರ್ ಮಾಡಿದ ಕಿಚ್ಚ ಸುದೀಪ್ - Mahanayaka
6:00 AM Thursday 12 - December 2024

ಕೋಟಿಗೊಬ್ಬ-3 ಬಿಡುಗಡೆಗೆ ಯಾರಿಂದ ತೊಂದರೆ ಆಯ್ತು ಅಂತ ಗೊತ್ತಿದೆ | ವಿಡಿಯೋ ಶೇರ್ ಮಾಡಿದ ಕಿಚ್ಚ ಸುದೀಪ್

kotigobba 3
14/10/2021

ಸಿನಿಡೆಸ್ಕ್:  ಇಂದು ಕೋಟಿಗೊಬ್ಬ—3 ಹಾಗೂ ಸಲಗ ಚಿತ್ರ ರಾಜ್ಯಾದ್ಯಂತ ಏಕ ಕಾಲಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಕೋಟಿಗೊಬ್ಬ –3 ಚಿತ್ರ ಇಂದು ಬಿಡುಗಡೆಯಾಗಿಲ್ಲ. ಇದರಿಂದಾಗಿ ಸುದೀಪ್ ಅಭಿಮಾನಿಗಳು ರೊಚ್ಚಿಗೆದ್ದು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವೆಡೆ ಚಿತ್ರಮಂದಿರಗಳಿಗೂ ಹಾನಿಯುಂಟು ಮಾಡಿರುವ ಘಟನೆಯು ನಡೆದಿದೆ.

ಈ ನಡುವೆ ಕಿಚ್ಚ ಸುದೀಪ್ ಅವರು ಘಟನೆಯ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ನಿರ್ಮಾಪಕ ಸೂರಪ್ಪ ಬಾಬು ಅವರ ಜೊತೆಗೆ ನಾವಿದ್ದೇವೆ. ನಾಳೆ 6 ಗಂಟೆಗೆ ಸಿನಿಮಾ ತೆರೆ ಕಾಣಲಿದೆ ಎಂದು ಸುದೀಪ್ ಮಾಹಿತಿ ನೀಡಿದ್ದಾರೆ.

ಇದಲ್ಲದೇ ಯಾರು ಕೂಡ ಚಿತ್ರಮಂದಿರವನ್ನು ಹಾನಿ ಮಾಡಬೇಡಿ, ಚಿತ್ರ ಬಿಡುಗಡೆ ವಿಳಂಬಕ್ಕೂ ಚಿತ್ರಮಂದಿರಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಚಿತ್ರ ಬಿಡುಗಡೆಗೆ ಯಾರಿಂದ ತೊಂದರೆಯಾಗಿದೆ ಎನ್ನುವುದು  ಎನ್ನುವುದು ನನಗೆ ಗೊತ್ತಿದೆ. ಅವರಿಗೆ ಕಾಲವೇ ಉತ್ತರ ನೀಡಲಿದೆ ಎಂದು ಕಿಚ್ಚ ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ನೈತಿಕ ಪೋಲಿಸ್ ಗಿರಿ: ಸಿಎಂ ಹೇಳಿಕೆ ದುಷ್ಕ್ರತ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವಂತಿದೆ | ಸಿಪಿಐಎಂ ಆಕ್ರೋಶ

ಪರಿವರ್ತನೆ ಬಯಸುವ ಚಲನಶೀಲ ಮನುಷ್ಯರಿಗೆಲ್ಲರಿಗೂ 65ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು

ಸಂಘ ಪರಿವಾರದ ಓಲೈಕೆಗೆ ಸಿಎಂ ಬೊಮ್ಮಾಯಿ ಈ ಮಟ್ಟಕ್ಕೆ ಇಳಿಯಬಾರದಿತ್ತು | ಸಿದ್ದರಾಮಯ್ಯ ಆಕ್ರೋಶ

ಕೆಲಸ ಮುಗಿಸಿ ತೆರಳುತ್ತಿದ್ದ ವ್ಯಕ್ತಿಗೆ ದುಷ್ಕರ್ಮಿಗಳ ತಂಡದಿಂದ ಚೂರಿ ಇರಿತ!

ಹಬ್ಬದ ದಿನವೇ ಘೋರ ಕೃತ್ಯ: ಸಾಂಬರ್ ಚೆನ್ನಾಗಿಲ್ಲ ಎಂದು ತಾಯಿ, ತಂಗಿಯನ್ನು ಗುಂಡು ಹಾರಿಸಿಕೊಂಡ ಪಾಪಿ!

ಅದೇ ವಿಡಿಯೋದಲ್ಲಿ ಬಿ.ವೈ.ವಿಜಯೇಂದ್ರ ಬಗ್ಗೆಯೂ ಮಾತನಾಡಿದ್ರಂತೆ ಸಲೀಂ | ವಿಡಿಯೋ ಕಟ್ ಮಾಡಿ ತೋರಿಸಲಾಗಿದೆ ಎಂಬ ಆರೋಪ

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಎಂಬ ಫೋಟೋ ವೈರಲ್: ದೂರು ದಾಖಲು

ಅನೈತಿಕ ಪೊಲೀಸ್ ಗಿರಿಯ ಸಮರ್ಥನೆ: ಸಿಎಂ ಹೇಳಿಕೆ ಕಾನೂನು ಸುವ್ಯವಸ್ಥೆಯನ್ನು ಗಂಡಾಂತರಕ್ಕೆ ತಳ್ಳಲಿದೆ | SDPI

ಇತ್ತೀಚಿನ ಸುದ್ದಿ