ಕಾಲೇಜು ಬಸ್ ಹಾಗೂ ಗ್ಯಾಸ್ ಲಾರಿ ನಡುವೆ ಅಪಘಾತ: ಉಡುಪಿ ಮೂಲದ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್

ಕೊಟ್ಟಿಗೆಹಾರ: ಕಾಲೇಜು ಬಸ್ ಹಾಗೂ ಗ್ಯಾಸ್ ಲಾರಿ ಮುಖಮುಖಿ ಡಿಕ್ಕಿಯಾದ ಪರಿಣಾಮ ಬಸ್ ನ ಚಾಲಕ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಗಾಯವಾಗಿದೆ.
ಉಡುಪಿಯಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಕಾಲೇಜ್ ಬಸ್, ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ನಡುವೆ ಮೂಖಾಮುಖಿ ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ಬಸ್ಸಿನ ಚಾಲಕನಿಗೆ ತೀವ್ರ ಪೆಟ್ಟಾಗಿದ್ದು, ಚಾಲಕನನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಕಾಲೇಜು ಬಸ್ ನಲ್ಲಿದ್ದ ಉಡುಪಿಯ ದಂತ ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 73 ಮೂಡಿಗೆರೆ ತಾಲೂಕಿನ ಚಕ್ ಮಕ್ಕಿ ಬಳಿ ಈ ಅಪಘಾತ ಸಂಭವಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw