ಹೊಸ ವರ್ಷ ಮುಗಿಸಿ ಊರಿಗೆ ಹೊರಟ ಪ್ರವಾಸಿಗರು: ಚಾರ್ಮಾಡಿ ಘಾಟ್ ನಲ್ಲಿ ಫುಲ್ ಟ್ರಾಫಿಕ್ ಜಾಮ್
ಚಿಕ್ಕಮಗಳೂರು: ಹೊಸ ವರ್ಷಾಚರಣೆಯ ಸೆಲೆಬ್ರೇಷನ್ ಮುಗಿಸಿ ಪ್ರವಾಸಿಗರು ತಮ್ಮ ಊರಿಗೆ ಮರಳುತ್ತಿದ್ದು, ಈ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಫುಲ್ ಟ್ರಾಫಿಕ್ ಜಾಮ್ ಸೃಷ್ಟಿಯಾಯಿತು.
ಇಯರ್ ಎಂಡ್ ಸೆಲೆಬ್ರೇಷನ್ ಮುಗಿಸಿ ಪ್ರವಾಸಿಗರು ಹೊಂ ಸ್ಟೇ, ರೆಸಾರ್ಟ್ ಚೆಕೌಟ್ ಮಾಡಿ ಹೊರಟಿದ್ದು, ಒಂದೇ ಬಾರಿಗೆ ಜನರು ಊರಿಗೆ ಪ್ರಯಾಣಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಸಾವಿರಾರು ವಾಹನಗಳು ಸಾಲು ಸಾಲಾಗಿ ನಿಂತಿರುವ ದೃಶ್ಯ ಕಂಡು ಬಂತು. ಕೊಟ್ಟಿಗೆಹಾರ ಸಮೀಪದಲ್ಲಿ ವಾಹನ ದಟ್ಟಣೆಯಿಂದ ವಾಹನ ಸವಾರರು ಪರದಾಡಿದರು. ವಾಹನಗಳು ಕಿಲೋ ಮೀಟರ್ ಗಟ್ಟಲೆ ಸರತಿ ಸಾಲಿನಲ್ಲಿ ಕಾಯುತ್ತಿರುವುದು ಕಂಡು ಬಂತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw