ಖ್ಯಾತ ಹಿರಿಯ ನಟಿ ಲಿಲಿತಾ ಇನ್ನಿಲ್ಲ: ಕಂಬನಿ ಮಿಡಿದ ಚಿತ್ರರಂಗ
ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಲಲಿತಾ ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಕೊನೆಯುಸಿರೆಳೆದಿದ್ದು, ಅವರಿಗೆ 74 ವರ್ಷ ವಯಸ್ಸಾಗಿತ್ತು.
ನಟಿ ಲಲಿತಾ ನಿಧನಕ್ಕೆ ಮಲಯಾಳಂ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದು, ರಾಜಕೀಯ ನೇತಾರು ಸಂತಾಪ ಸೂಚಿಸಿದ್ದಾರೆ. ‘ಕೇರಳ ಪೀಪಲ್ಸ್ ಆರ್ಟ್ ಕ್ಲಬ್’ ರಂಗತಂಡದ ಮೂಲಕ ಅಭಿನಯ ಆರಂಭಿಸಿದ್ದ ಲಲಿತಾ ಅವರು ಪ್ರತಿಭಾವಂತ ನಟಿ ಆಗಿದ್ದರು. 1969ರಲ್ಲಿ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಅವರು ಕಾಲಿಟ್ಟಿದ್ದರು.
ಲಲಿತಾ ಅವರ ಮೂಲ ಹೆಸರು ಮಹೇಶ್ವರಿ ಅಮ್ಮ. ಚಿತ್ರರಂಗದಲ್ಲಿ ಹಲವು ದಶಕಗಳ ಅನುಭವ ಹೊಂದಿದ್ದ ಲಲಿತಾ ಅವರನ್ನು ಎಲ್ಲರೂ ಗೌರವದಿಂದ ಕಾಣುತ್ತಿದ್ದರು. ಎರಡು ಬಾರಿ ‘ಅತ್ಯುತ್ತಮ ಪೋಷಕ ನಟಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದ ಅವರು ಎಂತಹ ಪಾತ್ರಕ್ಕೂ ನ್ಯಾಯ ದೊರಕಿಸುತ್ತಿದ್ದರು.
ಲಲಿತಾ ಅವರ ನಿಧನಕ್ಕೆ ಪೃಥ್ವಿರಾಜ್ ಸುಕುಮಾರನ್, ಮಂಜು ವಾರಿಯರ್, ಕೀರ್ತಿ ಸುರೇಶ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಲಲಿತಾ ಅವರ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಟ ಚೇತನ್ ಪೊಲೀಸ್ ವಶಕ್ಕೆ: ಚೇತನ್ ಎಲ್ಲಿದ್ದಾರೆ ಅನ್ನೋದು ಗೊತ್ತಿಲ್ಲ | ಪತ್ನಿ ಮೇಘಾ ಆತಂಕ
ಪತ್ನಿ, ಅತ್ತೆಯನ್ನು ಮಚ್ಚಿನಿಂದ ಹೊಡೆದು ಕೊಂದ ಪಾಪಿ!
ಬುರ್ಖಾ ಧರಿಸಿದವರಿಗೆ ಥಳಿತ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಅಸಲಿಯತ್ತು ಬಯಲು