KPSC KAS Recruitment 2024: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 384 ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು ಮತ್ತೆ ಅವಕಾಶ
ಕರ್ನಾಟಕ ಲೋಕಸೇವಾ ಆಯೋಗವು ಏಪ್ರಿಲ್ ತಿಂಗಳಿನಲ್ಲಿ ಕೆ ಎಸ್ ಅಧಿಕಾರಿ ಹುದ್ದೆಗಳಿಗೆ ಹಾಗೂ ಇತರೆ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿತ್ತು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮತ್ತೆ ಮುಂದೂಡಲಾಗಿ 15 ದಿನಗಳ ಕಾಲಾವಕಾಶ ನೀಡಿದ್ದು ಇದರ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
KPSC KAS Recruitment 2024 – ಕರ್ನಾಟಕ ಲೋಕಸೇವಾ ಆಯೋಗವು 2023 24 ನೇ ಸಾಲಿಗೆ ಗೆಜೆಟೆಡ್ ಪ್ರೋಬೇಶನರಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ನೊಂದಣಿಗೆ 15 ದಿನಗಳ ಮತ್ತೆ ಕಾಲಾವಕಾಶವನ್ನು ನೀಡಲಾಗಿದೆ.
ಇದೀಗ ಬಿಡುಗಡೆ ಆಗಿರುವ ಹೊಸ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21, 2024 ಆಗಿರುತ್ತದೆ. ಇಲ್ಲಿಯ ತನಕ ವಿವಿಧ ಕಾರಣಗಳಿಂದಾಗಿ ಅರ್ಜಿ ಸಲ್ಲಿಸದೇ ಇರುವಂತಹ ಅಭ್ಯರ್ಥಿಗಳು ಜುಲೈ 21ನೇ ತಾರೀಖಿನ ಒಳಗಾಗಿಯೇ ಅರ್ಜಿ ಸಲ್ಲಿಸಿರಿ.
ಈ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
* ಗ್ರೂಪ್ ಎ ಹುದ್ದೆಗಳು : 159 ಹುದ್ದೆಗಳು
* ಗ್ರೂಪ್ ಬಿ ಹುದ್ದೆಗಳು : 225 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ : 384 ಹುದ್ದೆಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿ ಪಡಿಸಿದ ಶೈಕ್ಷಣಿಕ ಅರ್ಹತೆ — ಕರ್ನಾಟಕ ಲೋಕಸೇವಾ ಆಯೋಗವು ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಯಾವುದಾದರು ಒಂದು ವಿಷಯದಲ್ಲಿ ಪದವಿ ಶಿಕ್ಷಣ ಮುಗಿಸಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ — 21 ಜುಲೈ 2024
ಅರ್ಜಿ ಸಲ್ಲಿಸುವ ಲಿಂಕ್ : www.kpsc.kar.nic.in
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: