ಭರ್ಜರಿ ₹97,100 ರೂ. ವೇತನ: ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ
ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್, ಕರ್ನಾಟಕ ರಾಜ್ಯ ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವಂತಹ ಗ್ರೂಪ್ ಎ ವೃಂದದ ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.
ಬಿ ಎಸ್ಸಿ ಇನ್ ವೇಟರ್ನರಿ ಸೈನ್ಸ್ ಮುಗಿಸಿ ಸರ್ಕಾರಿ ಪಶು ವೈದ್ಯಾಧಿಕಾರಿಗಳಾಗಬೇಕೆಂದು ಬಹು ವರ್ಷಗಳಿಂದ ನೇಮಕಾತಿಗಾಗಿ ಕಾಯುತ್ತಿರುವ ಅಂತಹ ಅಭ್ಯರ್ಥಿಗಳಿಗೆ ಇದೊಂದು ಸಂತಸದ ಸುದ್ದಿಯಾಗಿದ್ದು, ಕರ್ನಾಟಕ ಲೋಕಸೇವಾ ಆಯೋಗವು ಇದೀಗ 400 ಪಶು ವೈದ್ಯಾಧಿಕಾರಿಗಳ ನೇಮಕಾತಿಯನ್ನು ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿ ಅರ್ಜಿ ಆಹ್ವಾನಿಸಿದೆ.
KPSC Veterinary Doctor Recruitment 2024 – ಪಶು ವೈದ್ಯಧಿಕಾರಿಗಳ ನೇಮಕಾತಿ :
ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವಂತಹ 342 + 58 ಬ್ಯಾಕ್ ಲಾಗ್ ಹುದ್ದೆಗಳನ್ನು ಸೇರಿ ಒಟ್ಟು 400 ಪಶು ವೈದ್ಯಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಹಾಗೂ ಇತರೆ ಮಾಹಿತಿಗಳನ್ನು ಕೆಳಗಿನ ಲ್ಲಿ ನೀಡಲಾಗಿದೆ.
ಶೈಕ್ಷಣಿಕ ಅರ್ಹತೆಗಳ ಮಾಹಿತಿ – Eligibility Details
ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ B. Vsc ಪದವಿ ಮುಗಿಸಿರುವವರು ಅರ್ಜಿ ಸಲ್ಲಿಸಬಹುದು.
ಅದೇ ರೀತಿ ವಯಸ್ಸಿನ ಮಿತಿಯನ್ನು ನಾವು ನೋಡುವುದಾದರೆ ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದ ವಯೋಮಿತಿಯಲ್ಲಿರಬೇಕು. ಒಂದು ವೇಳೆ ನೀವು ಮೀಸಲಾತಿ ವ್ಯಾಪ್ತಿಯಲ್ಲಿ ಬರುವವರಿದ್ದರೆ ಗರಿಷ್ಠ ವಯೋಮಿತಿಯಲ್ಲಿ ನಿಮಗೆ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಆದರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂಪಾಯಿ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 52,650 ರೂ. – 97,100 ರೂ. ವೇತನವನ್ನು ನೀಡಲಾಗುತ್ತದೆ.
ನೇಮಕಾತಿಗಾಗಿ ನಿಗದಿಪಡಿಸಿರುವಂತಹ ಪ್ರಮುಖ ದಿನಾಂಕಗಳ ಮಾಹಿತಿ :
* ಅರ್ಜಿ ಸಲ್ಲಿಕೆ ಆರಂಭವಾಗುವ ದಿನಾಂಕ : 12 ಆಗಸ್ಟ್ 2024
* ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 12 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಲಿಂಕ್ : https://kpsc.kar.nic.in/
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: