ಕ್ರಾಂತಿ ಸಕ್ಸಸ್ ಬಳಿಕ ಮಲೆಮಹದೇಶ್ವರ ಬೆಟ್ಟಕ್ಕೆ ನಟ ದರ್ಶನ್ ಭೇಟಿ
13/02/2023
ಚಾಮರಾಜನಗರ: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರಿಂದು ತಮ್ಮ ಸ್ನೇಹಿತರ ಜೊತೆ ಇಂದು ಪ್ರಮುಖ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದೇವಾಲಯದ ವತಿಯಿಂದ ದರ್ಶನ್ ಅವರನ್ನು ಗೌರವಿಸಲಾಯಿತು. ಮುದ್ದು ಮಾದಪ್ಪನಿಗೆ ಪ್ರಾರ್ಥನೆ ಸಲ್ಲಿಸಿ ಹಿಂತಿರುಗುವಾಗ ನೆಚ್ಚಿನ ನಟನನ್ನು ಕಾಣಲು ಬೆಟ್ಟಕ್ಕೆ ಬಂದಿದ್ದ ಭಕ್ತರು ಮುಗಿಬಿದ್ದರು. ಜನದಟ್ಟನೆ ಚದುರಿಸಲು ಪೊಲೀಸರು ಹರಸಾಹಸಪಟ್ಟರು.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw