ಕ್ರೀಡಾಳುಗಳಿಗೆ ಪಠ್ಯಕ್ರಮದಂತೆ ಸೂಕ್ತ ಮಾರ್ಗದರ್ಶನ ನೀಡಬೇಕಿದೆ: ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು: ಅತ್ಯುತ್ತಮ ಕೋಚ್‌ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.
ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಪಾಲ್ಗೊಂಡು ಮಾತನಾಡಿದ ಅವರು, ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್‌ಗಳು ಮಾಡಬೇಕಾದ ಅಗತ್ಯವಿದೆ. ಅಮೃತ ಕ್ರೀಡಾ ಯೋಜನೆಯ ಗುರಿ ಈಡೇರಿಸಲು ಸರ್ಕಾರ ಅಗತ್ಯ ನೆರವು ನೀಡಲು ಬದ್ಧವಾಗಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಯುವಜನ ಸಬಲೀಕರಣಕ್ಕೆ ಮಹತ್ವವನ್ನು ನೀಡಿದೆ. ನೂತನ ಯುವ ನೀತಿಯನ್ನು ಸರ್ಕಾರ ಜಾರಿಗೊಳಿಸುತ್ತಿದೆ. ಕರ್ನಾಟಕ ಕ್ರೀಡೆಗೆ ವರದಾನವೆಂಬಂತೆ ಸ್ವತಃ ಕ್ರೀಡಾ ಪಟುವಾಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದೊರೆತಿದ್ದಾರೆ. ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವುದು ಶ್ಲಾಘನೀಯ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಇಂದು ಬಿಎಸ್‍ಪಿ ವರಿಷ್ಠೆ ಮಾಯಾವತಿ ಅವರ ಜನ್ಮದಿನ: ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ
ಪೊಲೀಸರ ವೇಷದಲ್ಲಿ ಮನೆಗೆ ದಾಳಿ ನಡೆಸಿ ಚಿನ್ನಾಭರಣ ದೋಚಿದ ಕಳ್ಳರು!
ನವದೆಹಲಿ: ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ
ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಮುಳಯ್ಕಲ್ ತಪ್ಪಿತಸ್ಥನಲ್ಲ; ಕೋರ್ಟ್