“ಕೃಷಿ ಕಾಯ್ದೆ ರದ್ದು ಮಾಡುವ ಪರಿಸ್ಥಿತಿ ಬಂದೇ ಬರುತ್ತದೆ” | ನಿಜವಾಯ್ತು ರಾಹುಲ್ ಗಾಂಧಿ ಹೇಳಿಕೆ
ನವದೆಹಲಿ: “ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಕೃಷಿ ಕಾಯ್ದೆಯನ್ನು ರದ್ದು ಮಾಡುವ ಪರಿಸ್ಥಿತಿ ಸರ್ಕಾರಕ್ಕೆ ಬಂದೇ ಬರುತ್ತದೆ” ಎಂದು ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಇದೀಗ ವೈರಲ್ ಆಗಿದ್ದು, 2021ರ ಜನವರಿ 14ರಂದು ನೀಡಿದ್ದ ಹೇಳಿಕೆ ಇದೀಗ ವೈರಲ್ ಆಗಿದೆ.
ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ಆರಂಭವಾದಾಗ ರಾಹುಲ್ ಗಾಂಧಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಈ ಮಾತುಗಳನ್ನಾಡಿದ್ದರು. ಈ ಹೇಳಿಕೆ ಇದೀಗ ನಿಜವಾಗಿದೆ ಪ್ರಧಾನಿ ನರೇಂದ್ರ ಮೋದಿ ಅವರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.
ಇನ್ನೂ ಇದೇ ಅಕ್ಟೋಬರ್ 29 ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಈಗ(ಪ್ರತಿಭಟನಾ ಸ್ಥಳದಲ್ಲಿ) ಬ್ಯಾರಿಕೇಡ್ ಗಳನ್ನು ಮಾತ್ರವೇ ತೆಗೆದು ಹಾಕಲಾಗಿದೆ. ಈ ಕರಾಳ ಕಾಯ್ದೆಗಳನ್ನು ಕೂಡ ಶೀಘ್ರದಲ್ಲೇ ತೆಗೆದು ಹಾಕಲಾಗುತ್ತದೆ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗಳನ್ನು ಕಾಂಗ್ರೆಸ್ ಕಾರ್ಯಕರ್ತರು ರಿ ಟ್ವೀಟ್ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶ್ರೀಕೃಷ್ಣ ಪರಮಾತ್ಮನ ಕೈ ತುಂಡಾಯಿತು ಎಂದು ವಿಗ್ರಹವನ್ನು ಆಸ್ಪತ್ರೆಗೆ ದಾಖಲಿಸಿದ ಅರ್ಚಕ
ಪ್ರವಾಹಕ್ಕೆ ನಲುಗಿದ ಆಂಧ್ರಪ್ರದೇಶ: 17 ಮಂದಿ ಸಾವು, 100ಕ್ಕೂ ಅಧಿಕ ಮಂದಿ ನಾಪತ್ತೆ
ಆಟೋ—ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಮಕ್ಕಳ ಸಹಿತ ಐವರ ದಾರುಣ ಸಾವು
ಅಪ್ರಾಪ್ತೆಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದ ಯುವಕ ಆತ್ಮಹತ್ಯೆಗೆ ಶರಣು
ಕೃಷಿ ಕಾಯ್ದೆ ವಾಪಸ್ | ಪತ್ರಕರ್ತರ ಪ್ರಶ್ನೆಗೆ ನಿರುತ್ತರವಾಗಿ ಮುಂದೆ ನಡೆದ ಸಚಿವೆ ಶೋಭಾ ಕರಂದ್ಲಾಜೆ