ತಾಯಿ, ಸಹೋದರನ ಬಳಿಕ ತಂದೆಯನ್ನೂ ಕಳೆದುಕೊಂಡ ನಟ ಮಹೇಶ್ ಬಾಬು
ಹೈದರಾಬಾದ್: ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಹಿರಿಯ ನಟ, ನಟ ಮಹೇಶ್ ಬಾಬು ಅವರ ತಂದೆ ಕೃಷ್ಣ ಅವರು ಇಂದು ನಿಧನರಾಗಿದ್ದು, ಸಹೋದರ ಮತ್ತು ತಾಯಿಯನ್ನು ಕಳೆದುಕೊಂಡಿದ್ದ ಮಹೇಶ್ ಬಾಬು ಅವರು ಇದೀಗ ತಮ್ಮ ತಂದೆಯನ್ನೂ ಕಳೆದುಕೊಂಡಿದ್ದಾರೆ.
ಉಸಿರಾಟ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು, ನಿನ್ನೆ ಸಂಜೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಅವರಿಗೆ ವೈದ್ಯರು ನಿರಂತರವಾಗಿ ಚಿಕಿತ್ಸೆ ನೀಡಿದರೂ, ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಕೃಷ್ಣ ಅವರಿಗೆ 80 ವರ್ಷ ವಯಸ್ಸಾಗಿತ್ತು. ಸುಮಾರು 350ಕ್ಕೂ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಲವಾರು ಪ್ರಯೋಗಾತ್ಮಕ ಚಿತ್ರಗಳಿಂದ ಕೃಷ್ಣ ಅವರು ಹೆಸರುವಾಸಿಯಾಗಿದ್ದರು. ಪತ್ತೇದಾರಿ, ಐತಿಹಾಸಿಕ, ಪೌರಾಣಿಕ, ಪಾಶ್ಚಾತ್ಯ, ಆಕ್ಷನ್ ಹಾಗೂ ಕೌಬಾಯ್ ಚಲನಚಿತ್ರಗಳು ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಅಭಿನಯಿಸುವ ಮೂಲಕ ಜನಮನ್ನಣೆ ಗಳಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka