ಮುಡಾ ಕೇಸ್ ನಲ್ಲಿ ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ!
17/12/2024
ಬೆಂಗಳೂರು: ಸಿಎಂ ವಿರುದ್ಧ ಮುಡಾ ಹಗರಣದ ದೂರು ದಾರ ಸ್ನೇಹಮಯಿ ಕೃಷ್ಣ ಕಳೆದ 3 ದಿನಗಳಿಂದ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ ಬೆನ್ನಲ್ಲೇ ಕೃಷ್ಣ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಎಫ್ ಐಆರ್ ದಾಖಲಿಸಲಾಗಿತ್ತು. ಇದರ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಮೂರು ದಿನಗಳಿಂದ ಕೃಷ್ಣ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ. ಇದೀಗ ಪೊಲೀಸರು ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: