ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದ ಮಂಡಿಸಬೇಡಿ, ಕಾನೂನು ಕ್ರಮಕೈಗೊಳ್ಳಿ: ಸಿಎಂಗೆ ಸಿದ್ದರಾಮಯ್ಯ ಮನವಿ
ಬೆಳಗಾವಿ: ಬೆಳಗಾವಿಯಲ್ಲಿರುವ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರ ಕೃತ್ಯದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಗೂಂಡಾಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿಯವರೇ ಇಂತಹ ಘಟನೆಗಳಿಗೆ, ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ ಎಂದು ಅವರು ಹೇಳಿದ್ದಾರೆ.
ಕನ್ನಡಿಗರು ಈ ಬಗ್ಗೆ ಯಾವುದೇ ಆವೇಶಕ್ಕೊಳಗಾಗದೇ ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳ ರಕ್ಷಣೆ: ಕೋಟಾ ಶ್ರೀನಿವಾಸ್ ಪೂಜಾರಿ
ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು: ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರಿಯಕರನ ಸಾವಿನಿಂದ ನೊಂದು ನೇಣಿಗೆ ಶರಣಾದ ಯುವತಿ!
ಉಪ್ಪಿನಂಗಡಿ ಘಟನೆ ಖಂಡಿಸಿ ಮಂಗಳೂರಿನಲ್ಲಿ ಪಿಎಫ್ ಐ ಬೃಹತ್ ಪ್ರತಿಭಟನೆ
ಸಿದ್ದರಾಮಯ್ಯ, ಸಿಎಂ ಇಬ್ರಾಹಿಂ ಬೈದಾಡಿಕೊಳ್ಳುತ್ತಿರುವ ವಿಡಿಯೋ ಬಗ್ಗೆ ಸಿಎಂ ಇಬ್ರಾಹಿಂ ಹೇಳಿದ್ದೇನು ಗೊತ್ತಾ?
ಅತ್ಯಾಚಾರದ ಬಗ್ಗೆ ವ್ಯಂಗ್ಯ: ಸ್ಪೀಕರ್ ಕಾಗೇರಿ ಕ್ಷಮೆ ಕೇಳುವುದಿಲ್ಲವೇ? ಎಂಬ ಪ್ರಶ್ನೆಗೆ ನಿರುತ್ತರವಾದ ಯಡಿಯೂರಪ್ಪ