ಎರಡು ಪ್ರತ್ಯೇಕ ಪ್ರದೇಶಗಳಲ್ಲಿ ಕೆಎಸ್ಸಾರ್ಟಿಸಿ ಬಸ್ ಗೆ ಕಲ್ಲೆಸೆತ

11/12/2020

ಕಲಬುರಗಿ: ಸಾರಿಗೆ ನೌಕರರ ಮುಷ್ಕರ ಬುಗಿಲೆದ್ದಿದ್ದು, ಮುಷ್ಕರದ ನಡುವೆಯೇ ಕೆಎಸ್ಸಾರ್ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ  ಕಲಬುರಗಿ ಜಿಲ್ಲೆಯ ಕೋರ್ಟ್ ಬಳಿ ನಡೆದಿದೆ.

ಗಾಣಗಾಪುರದಿಂದ ಕಲಬುರಗಿ ನಗರಕ್ಕೆ ಬರುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಈ ಕೃತ್ಯ ಎಸಗಿದವರು ಯಾರು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಪ್ರತಿಭಟನಾಕಾರರು ಈ ಕೃತ್ಯ ಎಸಗಿರುವ ಸಾಧ್ಯತೆಗಳಿಲ್ಲ ಎಂದು ಹೇಳಲಾಗಿದೆ.

ಇನ್ನೂ ಬೆಂಗಳೂರಿನ ನೆಲಮಂಗಲ ಬಳಿಯಲ್ಲಿ ಕೂಡ ಕೆಎಸ್ಸಾರ್ಟಿಸಿ ಬಸ್ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಕಲ್ಲು ತೂರಾಟದ ಪರಿಣಾಮ ಬಸ್ ನ ಗಾಜು ಪುಡಿಯಾಗಿದೆ.

ಇತ್ತೀಚಿನ ಸುದ್ದಿ

Exit mobile version