ಬಸ್ಸಿನಿಂದ ವ್ಯಕ್ತಿಯನ್ನು ಒದ್ದು ಹೊರ ಹಾಕಿರುವ ಘಟನೆ: ಕೆಎಸ್ಸಾರ್ಟಿಸಿ ಹೇಳಿದ್ದೇನು?
ಬಸ್ ನಲ್ಲಿ ಪಾನಮತ್ತ ಎಂದು ಹೇಳಲಾದ ಪ್ರಯಾಣಿಕನಿಗೆ ಹಲ್ಲೆ ನಡೆಸಿ ಕಾಲಿನಿಂದ ದೂಡಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಲ್ಲಿ ನಿರ್ವಾಹಕನನ್ನು ಅಮಾನತು ಮಾಡಲಾಗಿದೆ.
ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಈಶ್ವರಮಂಗಲದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಡುವನ್ನೂರು ಗ್ರಾಮದ ಪದಡ್ಕದ ನಿವಾಸಿ ಕೃಷ್ಣಪ್ಪ ಎಂಬುವವರು ಪದಡ್ಕಕ್ಕೆ ಹೋಗಲು ಬಸ್ಸನ್ನು ಹತ್ತಿದ್ದು, ಮದ್ಯಪಾನ ಮಾಡಿದ್ದಾನೆ ಎಂದು ಬಸ್ ನಿರ್ವಾಹಕ ಕೃಷ್ಣಪ್ಪರನ್ನು ಕೈಯಿಂದ ದೂಡಿ, ಹಲ್ಲೆ ನಡೆಸಿ ಕಾಲಿನಿಂದ ಒದ್ದಿರುವುದರಿಂದ ಪ್ರಯಾಣಿಕ ಕೃಷ್ಣಪ್ಪ ಕೆಳಗೆ ರಸ್ತೆಗೆ ಬಿದ್ದಿದ್ದಾರೆ.
ಈ ಕೃತ್ಯದ ವೀಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕೃತ್ಯಕ್ಕೆ ಕಾರಣರಾದ ಬಸ್ ನಿರ್ವಾಹಕನನ್ನು ಅಮಾನತುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದರು.
ಅದ್ರಂತೆ ಕ್ರಮ ಕೈಗೊಳ್ಳಲಾಗಿದೆ. KSRTC ಚಾಲನಾ ಸಿಬ್ಬಂದಿಗಳಿಗೆ ಸಾರ್ವಜನಿಕ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ನಿರಂತರ ತರಬೇತಿ ಹಾಗೂ ತಿಳುವಳಿಕೆ ನೀಡಿದ್ದಾಗ್ಯೂ ಸಹ ಈ ರೀತಿಯ ಘಟನೆ ನಡೆದಿರುವುದು ದುಃಖದ ಸಂಗತಿ. ನಿಗಮದ ಸಿಬ್ಬಂದಿಗಳಿಗೆ ಇನ್ನೂ ಹೆಚ್ಚಿನ ತರಬೇತಿ ನೀಡಿ ಪ್ರಯಾಣಿಕರೊಡನೆ ಸೌಜನ್ಯವಾಗಿ ವರ್ತಿಸುವ ಸಂಬಂಧ ಕ್ರಮಕೈಗೊಳ್ಳಲಾಗುವುದು ಹಾಗೂ ಈ ರೀತಿಯ ಘಟನೆಗಳಿಗೆ ಕಾರಣರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಲಾಗಿದೆ’ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka