ಮರಾಠಿ ಭಾಷೆಯಲ್ಲಿ ಮಾತನಾಡಲಿಲ್ಲವೆಂದು KSRTC ಕಂಡೆಕ್ಟರ್ ಮೇಲೆ ಹಲ್ಲೆ

ಬೆಳಗಾವಿ: ಮರಾಠಿ ಭಾಷೆಯಲ್ಲಿ ಮಾತನಾಡಲಿಲ್ಲವೆಂದು KSRTC ಬಸ್ಸಿನ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿಯ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಸುಲೇಭಾವಿ ಗ್ರಾಮದಲ್ಲಿ ಯುವಕನ ಜೊತೆ ಬಸ್ ಹತ್ತಿದ ಯುವತಿಯೋರ್ವಳು ಮರಾಠಿಯಲ್ಲಿ ಮಾತನಾಡಿದ್ದಳು. ಆಗ ನಾನು ನನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡು ಎಂದು ಹೇಳಿದ್ದಕ್ಕೆ ಜನರನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನೊಂದ ಕಂಡಕ್ಟರ್ ಮಹಾದೇವಪ್ಪ ಮಲ್ಲಪ್ಪ ಹುಕ್ಕೇರಿ(51) ತಿಳಿಸಿದ್ದಾರೆ.
ಮರಾಠಿ ಬರಲ್ಲ ಎಂದಿದ್ದಕ್ಕೆ ಮರಾಠಿ ಕಲಿಯಬೇಕು ಎಂದು ಕಂಡೆಕ್ಟರ್ ನ್ನು ನಿಂದಿಸಿದ್ದು, ಇದ್ದಕ್ಕಿದ್ದಂತೆ ಜನ ಜಮಾಯಿಸಿ ಕಂಡೆಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಂಡೆಕ್ಟರ್ ತಿಳಿಸಿದ್ದಾರೆ.
ಗಾಯಗೊಂಡ ಬಸ್ ಕಂಡಕ್ಟರ್ ಅನ್ನು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: