ಬಸ್ ನೌಕರರ ಮುಷ್ಕರ : ಬಸ್ ಇಲ್ಲದೇ ಪರದಾಡುತ್ತಿರುವ ಪ್ರಯಾಣಿಕರು
11/12/2020
ಬೆಂಗಳೂರು: ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ ಕರ್ತವ್ಯಕ್ಕೆ ಇಳಿಯದೇ ಇಂದು ಅನೇಕ ಬಸ್ ನಿಲ್ದಾಣಗಳಲ್ಲಿಯೇ ಉಳಿದುಕೊಂಡಿದೆ.
ಅನೇಕ ಕಡೆಗಳಲ್ಲಿ ಫಸ್ಟ್ ಶಿಫ್ಟ್ ವಾಹನಗಳು ಇನ್ನೂ ಪ್ರಾರಂಭವಾಗಿಲ್ಲ ಎಂದು ವರದಿಯಾಘಿದ್ದು, ರಾಜ್ಯದಲ್ಲಿ : ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಈ ನಾಲ್ಕು ನಿಗಮ ಸಾರಿಗೆ ಸಿಬ್ಬಂದಿ ಮುಷ್ಕರ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳು ಸಂಚಾರ ಸ್ಥಗಿತಗೊಳಿಸಿದ್ದು, ತಮ್ಮನ್ನು ಸಾರಿಗೆ ನೌಕರರು ಎಂದು ಪರಿಗಣಿಸಬೇಕು ಎಂದು ಬಿಎಂಟಿಸಿ ಬಸ್ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ.
ಇನ್ನೂ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ರಾಜ್ಯದ ಹಲವೆಡೆಗಳಲ್ಲಿ ಕೆಎಸ್ಸಾರ್ಟಿಸಿ ಬಸ್ ಗಳ ಸಂಚಾರ ಸ್ಥಗಿತವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಬಸ್ ಗಳಿಲ್ಲದೇ ನಿಲ್ದಾಣದಲ್ಲಿ ಕಾಯುವಂತಾಗಿದೆ.