KSRTCಯಲ್ಲಿ ಕೆಲಸದ ಆಫರ್ ನೀಡಿ 500 ಮಂದಿಯನ್ನು ವಂಚಿಸಿದ ಇಬ್ಬರು ಅರೆಸ್ಟ್ - Mahanayaka
12:07 AM Tuesday 4 - February 2025

KSRTCಯಲ್ಲಿ ಕೆಲಸದ ಆಫರ್ ನೀಡಿ 500 ಮಂದಿಯನ್ನು ವಂಚಿಸಿದ ಇಬ್ಬರು ಅರೆಸ್ಟ್

arrest
17/10/2021

ಬೆಂಗಳೂರು:  ಕೆಎಸ್ಸಾರ್ಟಿಸಿಯಲ್ಲಿ ಕೆಲಸದ ಅಮಿಷವೊಡ್ಡಿ 500ಕ್ಕೂ ಅಧಿಕ ಜನರನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದು, ವಿಚಾರಣೆಯ ಇವರಿಬ್ಬರು ಸರಣಿ ವಂಚನೆ ನಡೆಸಿರುವುದು ಬಯಲಿಗೆ ಬಂದಿದೆ.

ಹರಿಬೊಮ್ಮನಹಳ್ಳಿ ಮೂಲದ ಮಂಜುನಾಥ್ ಮತ್ತು ಅನೀಲ್ ಬಂಧಿತ ಆರೋಪಿಗಳಾಗಿದ್ದು, ಮಂಜುನಾಥ್ ಈ ಹಿಂದೆ ಕೆಎಸ್ಸಾರ್ಟಿಸಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ದುರ್ನಡತೆಯ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು ಎಂದು ವರದಿಯಾಗಿದೆ.

ಕೆಲಸದಿಂದ ವಜಾಗೊಂಡಿದ್ದ ಮಂಜುನಾಥ್, ಅನೀಲ್ ಎಂಬಾತನೊಂದಿಗೆ ಸೇರಿ ಸರಣಿ ವಂಚನೆ ನಡೆಸಿರುವುದು ಬೆಳಕಿಗೆ ಬಂದಿದ್ದು, ಬಳ್ಳಾರಿ, ಗದಗ, ಚಿತ್ರದುರ್ಗ ದಾವಣಗೆರೆ ಸೇರಿದಂತೆ ಹಲವೆಡೆಗಳಲ್ಲಿ ಚಾಲಕ, ನಿರ್ವಾಹಕ, ಆಫೀಸರ್ ಕೆಲಸ ಸೇರಿದಂತೆ ಹಲವು ಉದ್ಯೋಗಗಳ ಆಮಿಷ ನೀಡಿ 15 ಕೋಟಿಗೂ ಅಧಿಕ ರೂಪಾಯಿ ದೋಚಿದ್ದರು ಎಂದು ಹೇಳಲಾಗಿದ್ದು, ಇದೀಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಪತ್ನಿಯ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಶರಣಾದ ಪತಿ: ಕೌಟುಂಬಿಕ ಜಗಳ ದುರಂತ ಅಂತ್ಯ

BigNews: ಆರೆಸ್ಸೆಸ್ ನ ಹಿರಿಯ ಮುಖಂಡನಿಂದ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ

ಭಾರೀ ಮಳೆ, ಭೂಕುಸಿತಕ್ಕೆ ಕೇರಳದಲ್ಲಿ 18 ಮಂದಿ ಬಲಿ: ಕೇರಳದಲ್ಲಿ ಇಂದು ಕೂಡ ರೆಡ್ ಅಲಾರ್ಟ್!

ನಡು ಬೀದಿಯಲ್ಲಿ ತಲ್ವಾರ್ ಝಳಪಿಸುತ್ತಾ ಡಿಜೆಗೆ ಸ್ಟೆಪ್ ಹಾಕಿದ ಹಿಂದುತ್ವ ಕಾರ್ಯಕರ್ತರು!

“ಬಸ್ಸಿನಲ್ಲಿ ಓಡಾಡುತ್ತಿದ್ದ ಬಜರಂಗದಳದ ಕಾರ್ಯಕರ್ತ ಸಿ.ಟಿ.ರವಿ ಕೋಟಿ ರವಿ ಆಗಿದ್ದು ಹೇಗೆ?”

ಕೇರಳದಲ್ಲಿ ಮತ್ತೆ ಜಲಪ್ರಳಯದ ಭೀತಿ: ಬಿಟ್ಟು ಬಿಡದಂತೆ ಸುರಿಯುತ್ತಿದೆ ಭಾರೀ ಮಳೆ | ಮೂವರು ಬಲಿ

ತ್ರಿಶೂಲ ದೀಕ್ಷೆ ನೀಡಿದ್ದೇವೆಯೇ ಹೊರತು ಬಾಂಬ್, ಗ್ರೆನೈಡ್ ಕೊಟ್ಟಿದ್ದಲ್ಲ | ಶರಣ್ ಪಂಪ್ ವೆಲ್

ಇತ್ತೀಚಿನ ಸುದ್ದಿ