ದಿಲ್ಲಿಯಲ್ಲಿ ರೋಲ್ಸ್ ರಾಯ್ಸ್ ಕಾರು ಅಪಘಾತ: ಕುಬೇರ್ ಗ್ರೂಪ್ ನಿರ್ದೇಶಕ ಸೇರಿ ಹಲವರಿಗೆ ಗಾಯ

ದಿಲ್ಲಿಯಲ್ಲಿ ರೋಲ್ಸ್ ರಾಯ್ಸ್ ಕಾರು ಅಪಘಾತಕ್ಕೀಡಾಗಿದೆ. ರೋಲ್ಸ್ ರಾಯ್ಸ್ ಕಾರಿನಲ್ಲಿದ್ದ ಮೂವರಲ್ಲಿ ಕೈಗಾರಿಕೋದ್ಯಮಿ ಮತ್ತು ಕುಬೇರ್ ಗ್ರೂಪ್ ನಿರ್ದೇಶಕ ವಿಕಾಸ್ ಮಾಲು ಕೂಡ ಸೇರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಮಾಲು ಅವರು ಗುರುಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನವದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇನಲ್ಲಿ ರೋಲ್ಸ್ ರಾಯ್ಸ್ ಫ್ಯಾಂಟಮ್ ಕಾರು ಡಿಕ್ಕಿ ಹೊಡೆದ ಪರಿಣಾಮ ಟ್ಯಾಂಕರ್ ಲ್ಲಿದ್ದ ಮೂವರಲ್ಲಿ ಇಬ್ಬರು ಚಾಲಕ ಮತ್ತು ಅವರ ಸಹಾಯಕ ಸಾವನ್ನಪ್ಪಿದ್ದಾರೆ. ಚಾಲಕನನ್ನು ಹೊರತುಪಡಿಸಿ ಕಾರಿನಲ್ಲಿದ್ದ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎನ್ ಡಿಟಿವಿಯೊಂದಿಗೆ ಈ ಕುರಿತು ಮಾತನಾಡಿದ ನೂಹ್ ಪೊಲೀಸ್ ವರಿಷ್ಠಾಧಿಕಾರಿ ನರೇಂದ್ರ ಬಿಜರಾನಿಯಾ, ನಾಗಿನಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದಿದ್ದಾರೆ.
ರೋಲ್ಸ್ ರಾಯ್ಸ್ ಕಾರಿನಲ್ಲಿದ್ದ ವಿಕಾಸ್ ಮಾಲು ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಲು ಅಪಾಯದಿಂದ ಪಾರಾಗಿದ್ದಾರೆಯೇ ಎನ್ನಲಾಗಿದೆ.