ಕುಡಿದು ರಸ್ತೆಯಲ್ಲಿ ತೂರಾಡಿದ ಯಾತ್ರಿಕ: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಭಕ್ತರಿಗೆ ಕುಡುಕನ ಕಾಟ
ಕೊಟ್ಟಿಗೆಹಾರ: ಧರ್ಮಸ್ಥಳಕ್ಕೆ ಕೆಲ ದಿನಗಳಿಂದ ಸಾವಿರಾರು ಭಕ್ತಾಧಿಗಳು ಪಾದಯಾತ್ರೆಯಲ್ಲಿ ಸಾಗುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ಕುಡುಕನೊಬ್ಬ ಪಾದಯಾತ್ರಿಗಳಿಗೆ ಕಾಟ ಕೊಡುತ್ತಿದ್ದ ದೃಶ್ಯ ಕಂಡು ಬಂತು.
ಚನ್ನರಾಯಪಟ್ಟಣ ಮೂಲದ ವ್ಯಕ್ತಿಯೊಬ್ಬ ಪಾದಯಾತ್ರೆ ನೆಪದಲ್ಲಿ ಬಂದು ಕುಡಿದು ಅಸಭ್ಯವಾಗಿ ವರ್ತಿಸುತ್ತಿದ್ದ. ಪಾದಯಾತ್ರಿಗರು ಕುಡಿದು ಪಾದಯಾತ್ರೆಗೆ ಬಂದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡರು.
ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಬದಿಯ ಪ್ರಪಾತಕ್ಕೆ ಕಾಲು ಜಾರಿ ಬೀಳುವ ಅಪಾಯವಿರುವುದರಿಂದ ಪಾನಮತ್ತನಾಗಿ ಚಾರ್ಮಾಡಿ ಘಾಟ್ ನಲ್ಲಿದ್ದ ವ್ಯಕ್ತಿಗೆ ಸ್ಥಳೀಯರು ಹಾಗೂ ಪಾದಯಾತ್ರಿಗರು ಬುದ್ದಿ ಹೇಳಿ ಕಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw