ಕುಡಿತದ ಮತ್ತಿನಲ್ಲಿ ಅಪ್ರಾಪ್ತ ವಯಸ್ಸಿನ ತನ್ನ ಮಗಳನ್ನೇ ಅತ್ಯಾಚಾರ ನಡೆಸಿದ ತಂದೆ!
ಫತೇಪುರ: ಕುಡಿತದ ಮತ್ತಿನಲ್ಲಿ ತಂದೆಯೋರ್ವ ತನ್ನ 9 ವರ್ಷದ ಮಗಳ ಮೇಲೆಯೇ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಖಾಗಾ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತೀವ್ರವಾಗಿ ಮದ್ಯಪಾನ ಮಾಡಿ ಬಂದಿದ್ದ ತಂದೆಯ ಪಕ್ಕದಲ್ಲಿ ಮಗಳು ಮಲಗಿದ್ದಳು ಎನ್ನಲಾಗಿದೆ. ಕುಡಿತದ ಮತ್ತಿನಲ್ಲಿ ಪಾಪಿ ತಂದೆ ತನ್ನ ಮಗಳ ಮೇಲೆಯೇ ಅತ್ಯಾಚಾರ ನಡೆಸಿದ್ದಾನೆ. ಇದೇ ವೇಳೆ ಬಾಲಕಿ ಜೋರಾಗಿ ಅಳುತ್ತಿರುವ ಸದ್ದು ಕೇಳಿ ಆರೋಪಿಯ ಸಹೋದರ ಸ್ಥಳಕ್ಕೆ ಬಂದಿದ್ದು, ಈ ವೇಳೆ ಆತನ ಕೃತ್ಯ ಬಯಲಾಗಿದೆ.
ಘಟನೆ ಸಂಬಂಧ ಆರೋಪಿಯ ಸಹೋದರ ದೂರು ದಾಖಲಿಸಿದ್ದು, ಮಂಗಳವಾರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಖಾಗಾದ ಪೊಲೀಸ್ ಡೆಪ್ಯುಟಿ ಸೂಪರಿಂಟೆಂಡೆಂಟ್ ಗಾಯದತ್ ಮಿಶ್ರಾ ತಿಳಿಸಿದ್ದಾರೆ. ಸದ್ಯ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ.
ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದು, ತಂದೆಯ ಜೊತೆಗೆ ಬಾಲಕಿ ವಾಸಿಸುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ವಿಪರೀತ ಕುಡಿತದ ದಾಸನಾಗಿದ್ದು, ಇದೀಗ ತನ್ನ ಮಗಳ ಮೇಲೆಯೇ ಮೃಗೀಯ ವರ್ತನೆ ತೋರಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಏಕಾಏಕಿ ಎದ್ದು ನಿಂತು ಅಂಬೇಡ್ಕರ್ ಫೋಟೋ ಯಾಕೆ ಹಾಕಿಲ್ಲ? ಎಂದು ಪ್ರಶ್ನಿಸಿದ ಶಾಸಕ ಅನ್ನದಾನಿ | ಗರಂ ಆದ ಸ್ಪೀಕರ್
ಬಿಜೆಪಿ ನಾಯಕರು ಡಿ.ಕೆ.ಶಿವಕುಮಾರ್ ಜೊತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರು | ಲಖನ್ ಜಾರಕಿಹೊಳಿ
ಮುಸ್ಲಿಮ್ ವ್ಯಕ್ತಿಯ ಪಾರ್ಥಿವ ಶರೀರ ಸಾಗಿಸಲು ದಾರಿ ಮಾಡಿಕೊಟ್ಟ ಹನುಮ ಮಾಲಾಧಾರಿಗಳು!
ಕಾನದ-ಕಟದರ ಜನನ: ತುಳುನಾಡಿನ ಅವಳಿ ವೀರರು-ಕಾನದ ಕಟದರು | ಸಂಚಿಕೆ: 10
ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣಿನ ಜೊತೆಗೆ ಶೇಂಗಾ ಮಿಠಾಯಿ ನೀಡಲು ನಿರ್ಧಾರ!