ಶಾಕಿಂಗ್ ನ್ಯೂಸ್: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯ ಕೊಳೆತ ಶವಪತ್ತೆ! - Mahanayaka
12:16 AM Tuesday 9 - September 2025

ಶಾಕಿಂಗ್ ನ್ಯೂಸ್: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯ ಕೊಳೆತ ಶವಪತ್ತೆ!

channapattana
09/10/2021

ಚನ್ನಪಟ್ಟಣ: ಜನರು ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದ್ದು, ಇದೀಗ ಇಡೀ ಗ್ರಾಮದ ಜನರ ಸ್ಥಿತಿ ಹೇಳತೀರದಂತಾಗಿದೆ.


Provided by

ನಗರದ ನ್ಯಾಯಾಲಯದ ಹಿಂಭಾಗದಲ್ಲಿ ಈ ಟ್ಯಾಂಕ್ ಇದೆ.  ಇಲ್ಲಿನ ಕೋಟೆ ಹಾಗೂ ಕುವೆಂಪು ನಗರದ ಭಾಗಗಳಿಗೆ ಇಲ್ಲಿಂದ ನೀರು ಪೂರೈಕೆಯಾಗುತ್ತಿದೆ ಎನ್ನಲಾಗಿದೆ. ಟ್ಯಾಂಕ್ ನ ಕೆಳಗಿನ ವಾಲ್ಟ್ ನಲ್ಲಿ ಕೊಳೆ ಶವ ಪತ್ತೆಯಾಗಿದ್ದು, ಮಹಿಳೆ ಮೃತಪಟ್ಟು ಬಹಳಷ್ಟು ದಿನಗಳಾಗಿದ್ದು, ಮಹಿಳೆಯ ದೇಹ ನೀರಿನಲ್ಲಿ ಸಂಪೂರ್ಣವಾಗಿ ಬೆರೆತು ಹೋಗಿದೆ ಎಂದು ವರದಿಯಾಗಿದೆ.

ಸದ್ಯ ನೀರಿನ ಟ್ಯಾಂಕ್ ನಲ್ಲಿರುವ ಮೃತದೇಹವನ್ನು ತೆಗೆಯಲು ಪೊಲೀಸರು ಹಾಗೂ ನಗರಸಭೆ ಸಿಬ್ಬಂದಿ ಕ್ರಮಕೈಗೊಂಡಿದ್ದಾರೆ. ಮಹಿಳೆಯ ಬಟ್ಟೆಗಳು ಹಾಗೂ ಚಪ್ಪಲಿ ಟ್ಯಾಂಕ್ ನ ಮೇಲೆ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ಇನ್ನೂ ತಿಳಿದು ಬಂದಿಲ್ಲ.

ಇನ್ನೂ ಘಟನೆಯ ಬಗ್ಗೆ ಕ್ಷೇತ್ರದ ಶಾಸಕ, ಮಾಜಿ ಸಿಎಂ ಕುಮಾರಸ್ವಾಮಿ, ಕೂಡಲೇ ಟ್ಯಾಂಕರ್ ಗಳ ಮೂಲಕ ಜನರಿಗೆ ನೀರು ಪೂರೈಕೆ ಮಾಡುವಂತೆ ಸೂಚಿಸಿದ್ದಾರೆ ಜೊತೆಗೆ ಓವರ್ ಹೆಡ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಿ, ಆ ನಂತರ ಅದರ ಸ್ವಚ್ಛತೆ ಖಾತರಿಪಡಿಸಿಕೊಂಡ ನಂತರ ಅಧಿಕಾರಿಗಳು ಅಧಿಕೃತವಾಗಿ ಹೇಳುವ ತನಕ ಯಾರೂ ಆ ಟ್ಯಾಂಕಿನ ನೀರನ್ನು ಬಳಸಬಾರದು ಎಂದು ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯ ಕೈ ಹಿಡಿದೆಳೆದು ಶಿಕ್ಷಕನಿಂದ ಅಸಭ್ಯ ವರ್ತನೆ | ವಿಡಿಯೋ ವೈರಲ್

ಕಲುಷಿತ ನೀರು ಸೇವಿಸಿ 25ಕ್ಕೂ ಅಧಿಕ ಮಂದಿ ಅಸ್ವಸ್ಥ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣ!

ಮಂಗಳೂರು: ಬಾಲಕಿಯನ್ನು ಅಪಹರಿಸಿ ನಿಗೂಢ ಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರ!

ರೈತರ ಮಾರಣಹೋಮ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರ ಪುತ್ರ ಪೊಲೀಸರ ಮುಂದೆ ಹಾಜರು

ದಸರ ಮುಗಿದ ತಕ್ಷಣವೇ 1ರಿಂದ 5ರವರೆಗೆ ಶಾಲೆ ಆರಂಭ | ಸಚಿವ ಬಿ.ಸಿ.ನಾಗೇಶ್

ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ: 100ಕ್ಕೂ ಅಧಿಕ ಮಂದಿ ಸಾವು

 

 

ಇತ್ತೀಚಿನ ಸುದ್ದಿ