ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ - Mahanayaka
1:22 AM Wednesday 5 - February 2025

ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

thavarchand gahlot
14/03/2022

ಮಂಗಳೂರು: ಇಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯಪಾಲರನ್ನು ಜಿಲ್ಲಾಡಳಿತ ಸ್ವಾಗತಿಸಿದೆ. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ ಕುಮಾರ್, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮಂಗಳೂರು ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಗೋಕರ್ಣನಾಥೇಶ್ವರನಿಗೆ ವಿಶೇಷ ಪೂಜೆ‌ ಸಲ್ಲಿಸಿದ್ದಾರೆ. ದೇವಸ್ಥಾನದ ಆಡಳಿತ ವತಿಯಿಂದ ಶಾಲು, ಫಲಪುಷ್ಪ,ದೇವರ ವಿಗ್ರಹ ನೀಡಿ ರಾಜ್ಯಪಾಲರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಬಳಿಕ ರಾಜ್ಯಪಾಲರು ದೇವಾಲಕ್ಕೆ ಭೇಟಿ ನೀಡಿದವರ ದಾಖಲೆ ಪುಸ್ತಕದಲ್ಲಿ ತಮ್ಮ ಹೆಸರು ಹಾಗೂ ಸಹಿ ‌ದಾಖಲಿಸಿದ್ದಾರೆ.

ಥಾವರ್ ಚಂದ್ ಗೆಹ್ಲೋಟ್ ಅವರು ಸಂಜೆ ಮೂಡಬಿದಿರೆಯ ಸಾವಿರ ಕಂಬದ ಬಸದಿಗೆ ಭೇಟಿ ನೀಡಿ ಬಳಿಕ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಶ್ಮೀರ ಫೈಲ್ಸ್ : ಮನುಷ್ಯನೊಳಗಿನ ಪ್ರಾಣಿ ಸ್ವಭಾವ ಇನ್ನಾದರೂ ಬದಲಾಗಲಿ!

ಅಂತಾರಾಷ್ಟ್ರೀಯ ಮೇಳದಲ್ಲಿ ಪರ್ಸ್ ಎಗರಿಸಿದ ನಟಿ ಅರೆಸ್ಟ್!

ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಗೆದ್ದಿದ್ದೇವೆ: ಸಚಿವೆ ಶೋಭಾ ಕರಂದ್ಲಾಜೆ

ಆಟೋಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್: ಕೆನಡಾದಲ್ಲಿ ಭಾರತ ಮೂಲದ ಐವರು ವಿದ್ಯಾರ್ಥಿಗಳ ಸಾವು

ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಭಗವಂತ್ ಮಾನ್: ರ್‍ಯಾಲಿಯಲ್ಲಿ ಭಾಗವಹಿಸಲಿರುವ ಕೇಜ್ರಿವಾಲ್

ಇತ್ತೀಚಿನ ಸುದ್ದಿ