ಬೆಂಗಳೂರು ವಿವಿ: ಕುಲಪತಿ ನೇಮಕ ರದ್ದಾದರೂ, ಮುಗಿಯದ ಗೊಂದಲ!
ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕ ರದ್ದಾದರೂ ಗೊಂದಲ ಮುಗಿದಿಲ್ಲ. ಕುಲಪತಿ ಬದಲಾವಣೆ ಕುರಿತು ಸರ್ಕಾರ, ರಾಜ್ಯಪಾಲರಿಂದ ಇನ್ನೂ ಯಾವುದೇ ನಿರ್ದೇಶನ ಸಿಕ್ಕಿಲ್ಲ. ಹೀಗಾಗಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರು ಗೊಂದಲದಲ್ಲಿದ್ದು, ಸಭೆಗಳ ಮೇಲೆ ಸಭೆ ಮಾಡಿ, ಕುಲಪತಿ ವಿವಾದ ಬಗೆಹರಿಸಿ ಎಂದು ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ.
.ಹೈಕೋರ್ಟ್ ತೀರ್ಪಿಗೂ ಬಗ್ಗದ ಕುಲಪತಿ!
ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಸ್ಥಾನಕ್ಕೆ ಪ್ರೊ.ವೇಣುಗೋಪಾಲ್ ಅವರನ್ನು ನೇಮಕ ಮಾಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿ ಮೂರು ದಿನಗಳ ಹಿಂದೆ ಆದೇಶ ಹೊರಡಿಸಿತ್ತು. ದಿನ ಮೂರು ದಿನಗಳು ಕಳೆದರೂ ಸರ್ಕಾರ ಮತ್ತು ರಾಜ್ಯಪಾಲರಿಂದ ಮುಂದೇನು ಮಾಡಬೇಕು ಅನ್ನೋದರ ಬಗ್ಗೆ ಯಾವುದೇ ನಿರ್ದೇಶನ ಬಂದಿಲ್ಲ. ಹೀಗಾಗಿ ವಿವಿಯ ಅಧಿಕಾರಿಗಳು ಪೇಚೆಗೆ ಸಿಲುಕಿದ್ದಾರೆ. ವಿವಿಯ ಸಿಂಡಿಕೇಟ್ ಸದಸ್ಯರು ಸಭೆಗಳ ಮೇಲೆ ಸಭೆ ಮಾಡಿ, ಈ ಅನಿಶ್ಚಿತತೆಯ ಬಗ್ಗೆ ಸ್ಪಷ್ಟ ಮಾರ್ಗದರ್ಶನ ನೀಡುವಂತೆ ಕೋರಿ ಅಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಡಾ.ವೇಣುಗೋಪಾಲ್ ಅವರು ಈಗಲೂ ಕುಲಪತಿ ಕಾರು ಬಳಕೆ ಮಾಡುತ್ತಿದ್ದಾರೆ. ತಮ್ಮ ವಿಭಾಗದ ಕಚೇರಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಈ ಕುರಿತು ಕಾನೂನು ಉಲ್ಲಂಘನೆಯಾಗುತ್ತದೆ ಎಂದು ಸಿಂಡಿಕೇಟ್ ಸದಸ್ಯ ಸುಧಾಕರ್ ದೂರುತ್ತಾರೆ.
ಗೊಂದಲದಲ್ಲಿ ವಿವಿ ಸಿಂಡಿಕೇಟ್ ಅಧಿಕಾರಿಗಳು!
ವಿವಿ ಕುಲಪತಿ ಹುದ್ದೆ ಖಾಲಿ ಇರುವುದರಿಂದ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ವಿವಿಯ ಮೇಲೆ ಕೆಟ್ಟಪರಿಣಾಮ ಬೀರುತ್ತದೆ. ಸರ್ಕಾರ, ರಾಜ್ಯಪಾಲರು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು. ಸರ್ಕಾರ ಕೂಡಲೇ ಹೊಸ ಕುಲಪತಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು, ಅಲ್ಲಿಯವರೆಗೆ ವಿವಿಯ ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿಯ ಹಿರಿಯ ಡೀನ್ ಅವರನ್ನೇ ರಾಜ್ಯಪಾಲರು ಹಂಗಾಮಿ ಕುಲಪತಿಯನ್ನು ನೇಮಕ ಮಾಡಬೇಕು ಎಂದು ಬೆಂ.ವಿವಿಯ ಸಿಂಡಿಕೇಟ್ ಸದಸ್ಯರು ಒತ್ತಾಯಿಸಿದ್ದಾರೆ. ಆದರೆ ಡಾ. ವೇಣುಗೋಪಾಲ ಅವರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರು ಕಾನೂನಿನ ತೊಡಕಿದ್ದು, ಆದಷ್ಟು ಬೇಗನೆ ನಿಯಮದ ಪ್ರಕಾರ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದ.ಕ. ಅಧ್ಯಕ್ಷರಾಗಿ ಕೆ.ಎಂ.ಫಯಾಝ್ ಆಯ್ಕೆ
ಹಿಜಾಬ್ ಧರಿಸಿದ್ದ ಮಹಿಳೆಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್
ಸ್ಫೋಟಗೊಂಡ ರಷ್ಯಾದ ನೌಕೆ :ಉಪಗ್ರಹ ಚಿತ್ರ ಬಿಡುಗಡೆ