ಕೂಲಿ ಕಾರ್ಮಿಕನನ್ನು ತಲವಾರಿನಿಂದ ಕೊಚ್ಚಿ ಭೀಕರ ಕೊಲೆ - Mahanayaka

ಕೂಲಿ ಕಾರ್ಮಿಕನನ್ನು ತಲವಾರಿನಿಂದ ಕೊಚ್ಚಿ ಭೀಕರ ಕೊಲೆ

sanjeeva shetty case
08/10/2021

ಬೆಳ್ತಂಗಡಿ: ಕೂಲಿ ಕಾರ್ಮಿಕರೊಬ್ಬರನ್ನು ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ವೇಣೂರು ಕರಿಮಣೇಲುವಿನಲ್ಲಿ ನಡೆದಿದ್ದು,  ಘಟನೆಗೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಸಂಬಂಧಿಕನೋರ್ವನನ್ನು  ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

60 ವರ್ಷ ವಯಸ್ಸಿ ಕೂಲಿ ಕಾರ್ಮಿಕ ಸಂಜೀವ ಶೆಟ್ಟಿ ಹತ್ಯೆಗೀಡಾದವರು ಎಂದು ಹೇಳಲಾಗಿದೆ. ಇವರ ಸಂಬಂಧಿಕ ಹಾಗೂ ಸ್ಥಳೀಯ ನಿವಾಸಿ ಶಿವು ಹತ್ಯೆ ಆರೋಪದಲ್ಲಿ ಬಂಧಿತ ವ್ಯಕ್ತಿ ಎಂದು ತಿಳಿದು ಬಂದಿದೆ. ರಾತ್ರಿ ವೇಳೆ ಇಬ್ಬರು ಕೂಡ ಜೊತೆಯಾಗಿ ಎಣ್ಣೆ ಹೊಡೆದಿದ್ದು, ಯಾವುದೋ ವಿಚಾರಕ್ಕೆ ಗಲಾಟೆ ನಡೆದು ಹತ್ಯೆ ನಡೆದಿರಬಹುದು ಎಂದು ಹೇಳಲಾಗಿದೆ.

ಹತ್ಯೆಯ ಸಂದರ್ಭ ಸಂಜೀವ ಶೆಟ್ಟಿ ಅವರು ಮನೆಯಲ್ಲಿ ಒಬ್ಬರೇ ಇದ್ದರು ಎಂದು ಹೇಳಲಾಗಿದೆ. ಹತ್ಯೆಗೆ ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದಿಂದ ಈ ಹತ್ಯೆ ನಡೆದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಮಕ್ಕಳು ಜ್ಯೂಸ್ ಕುಡಿದ ಬಳಿಕ ಜ್ಯೂಸ್ ಗೆ ವಿಷ ಬೆರೆಸಿದ್ದೇನೆ, ನಾನೂ ವಿಷ ಕುಡಿದ್ದೇನೆ ಎಂದ ತಂದೆ!

ವಿದ್ಯಾರ್ಥಿನಿ ನೀನಾಳ ಆತ್ಮಹತ್ಯೆಯ ಹಿಂದಿದೆ ಹಲವು ಅನುಮಾನಗಳು | ಸೂಕ್ತ ತನಿಖೆಗೆ ಆಗ್ರಹ

ಮದುವೆಯಾದ ಬಳಿಕ ನರಕ ತೋರಿಸಿದ ಪತಿ | ಹಿಂಸೆ ತಾಳಲಾರದೇ ಆತ್ಮಹತ್ಯೆಗೆ ಶರಣಾದ ಮಹಿಳೆ

ಸುಬ್ರಮಣಿಯನ್ ಸ್ವಾಮಿ, ವರುಣ್ ಗಾಂಧಿಗೆ ಕಾರ್ಯಕಾರಿಣಿಯಿಂದ ಗೇಟ್ ಪಾಸ್ ನೀಡಿದ ಬಿಜೆಪಿ!

ತನ್ನನ್ನು ಸಾಕಿದ ವ್ಯಕ್ತಿಯ ಮಡಿಲಿನಲ್ಲಿಯೇ ಪ್ರಾಣ ಬಿಟ್ಟ ಗೊರಿಲ್ಲ: ನೆಟ್ಟಿಗರ ಹೃದಯ ಕರಗಿಸಿದ ಫೋಟೋ

RSS ಶಿಕ್ಷಣ ನೀಡುತ್ತಿರುವುದು ರಾಷ್ಟ್ರ ನಿರ್ಮಾಣಕ್ಕಲ್ಲ, ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತಲು | ಬಿಜೆಪಿಗರಿಗೆ ಕುಮಾರಸ್ವಾಮಿ ತಿರುಗೇಟು

ಪ್ರಚೋದನಾತ್ಮಕ ಅವಹೇಳನಾಕಾರಿ ಭಾಷಣ:  ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲು

ಮಹಿಳೆಗೆ ಪೆಟ್ರೋಲ್ ಸುರಿದು ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ | “ಪಾಳೆಗಾರಿಕೆ ಮನಸ್ಥಿತಿಯ ಕ್ರಿಮಿಗಳಿಗೆ  ಕಠಿಣ ಶಿಕ್ಷೆಯಾಗಲಿ”

ಇತ್ತೀಚಿನ ಸುದ್ದಿ