ಕೂಲಿ ಕೆಲಸಕ್ಕೆ ಬರುತ್ತಿದ್ದ ಯುವತಿಯ ಅತ್ಯಾಚಾರ | ಸಜೀವ ದಹಿಸಿ ಭೀಕರ ಹತ್ಯೆ

karnul
23/04/2021

ಕರ್ನೂಲ್: ಯುವತಿಯೋರ್ವಳನ್ನು ಅತ್ಯಾಚಾರ ನಡೆಸಿ, ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಯಾಗಂಟಿಪಲ್ಲಿ ಬಳಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಓರ್ವನ ಮೇಲೆ ಯುವತಿಯ ತಂದೆ ಅನುಮಾನ ವ್ಯಕ್ತಪಡಿಸಿದ್ದಾರೆ.

 

ಗಾಲೇರು ನಗರಿಯ ಪ್ರಾಜೆಕ್ಟ್ ನಲ್ಲಿ ತಂದೆಯ ಜೊತೆಗೆ ಸಂತ್ರಸ್ತ ಯುವತಿ ಕೂಲಿ ಕೆಲಸ ಮಾಡಲು ಬರುತ್ತಿದ್ದಳು. ತಂದೆಯ ಜೊತೆಗೆ ದಿನವೂ ಬರುತ್ತಿರುವ ಯುವತಿಯ ಮೇಲೆ ದುಷ್ಕರ್ಮಿಗಳು ಕಣ್ಣಿಟ್ಟಿದ್ದು, ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದರು.

 

ಆಂಧ್ರಪ್ರದೇಶದ ನಾರಾಯಣ ಪೇಟೆಯ ಬಳಿ ಯುವತಿ ಒಬ್ಬಂಟಿಯಾಗಿ ಹೋಗುತ್ತಿದ್ದ ವೇಳೇ ಆಕೆಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದು, ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗಿದೆ.

 

ಇನ್ನೂ ಕರ್ನೂಲ್ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಸಂತ್ರಸ್ತ ಯುವತಿಯ ತಂದೆ ಅನುಮಾನ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version