ಮಾಜಿ ಸಿಎಂ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್
17/04/2021
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ನನಗೆ ಕೊವಿಡ್ 19 ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ. ಹಾಗಾಗಿ ಕಳೆದ ಕೆಲವು ದಿನಗಳಿಂದ ನನ್ನ ಜೊತೆಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಅವರು ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವೇಳೆ ಶೀತ, ಜ್ವರ ಕಾಣಿಸಿಕೊಂಡ ಪರಿಣಾಮ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ಪಾಸಿಟಿವ್ ವರದಿ ಬಂದಿದೆ.