ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಗೊಂಡ ಬಿಲ್ಲವ ಮುಖಂಡ
![jds udupi](https://www.mahanayaka.in/wp-content/uploads/2022/08/jds-udupi.jpg)
ಉಡುಪಿಯ ಪ್ರಖ್ಯಾತ ವಕೀಲ, ಬಿಲ್ಲವ ಮುಖಂಡ, ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷರು ಆದ ಸಂಕಪ್ಪ.ಎ ಅವರು ಮಾಜಿ ಸಿಎಂ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಗೊಂಡರು.
ಆಗಸ್ಟ್ 1 ರಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಜಾತ್ಯತೀತ ಜನತಾದಳ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್. ಎಲ್. ಭೋಜೆ ಗೌಡ, ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ನಾಯಕರಾದ ವಸಂತ ಪೂಜಾರಿ ಮಂಗಳೂರು, ಇಕ್ಬಾಲ್ ಮಂಗಳೂರು, ಇಕ್ಬಾಲ್ ಅತ್ರಾಡಿ, ಭರತ್ ಕುಮಾರ್ ಶೆಟ್ಟಿ, ಸಂಜಯ ಕುಮಾರ್, ಚಂದ್ರಹಾಸ್ ಮತ್ತುರಜಾಕ್ ಉಚ್ಚಿಲ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka