ಕುಮಾರಸ್ವಾಮಿಯನ್ನು ಅಗತ್ಯ ಬಿದ್ರೆ ಬಂಧಿಸ್ತೀವಿ… ಆದ್ರೆ…!: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
![siddaramaiah](https://www.mahanayaka.in/wp-content/uploads/2024/08/siddaramaiah-2.jpg)
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ಧ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲದೆ ಮತ್ತೇನು? ಎಂದು ಅವರು ಪ್ರಶ್ನಿಸಿದ್ದಾರೆ.
ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್.ಐ.ಟಿ ಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್.ಐ.ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಅಂತ ಅವರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: