ಬಿಗ್ ಶಾಕಿಂಗ್ ನ್ಯೂಸ್: ಮಾಜಿ ಸಿಎಂ ಕುಮಾರಸ್ವಾಮಿಗೇ ಬೆಡ್ ಇಲ್ಲಯೆಂದ ಆಸ್ಪತ್ರೆ!
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಬೆನ್ನಲ್ಲೇ ಇನ್ನೊಂದು ಆಘಾತಕಾರ ವಿಚಾರ ನಡೆದಿದ್ದು, ಮಾಜಿ ಮುಖ್ಯಮಂತ್ರಿಗೇ ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಎಂಬ ಉತ್ತರ ದೊರಕಿದೆ.
ಹೌದು…! ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ಹೋಗಿದ್ದ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಸಂಜೆಯೇ ದಣಿವು ಕಾಣಿಸಿಕೊಂಡಿದೆ. ಹೀಗಾಗಿಯೇ ಬೆಂಗಳೂರಿಗೆ ಮರಳಿದವರು ಮನೆಗೆ ಹೋಗದೆ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ. ಇಂದು ಬೆಳಗ್ಗೆ ಅವರಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢಗೊಂಡಿತ್ತು.
ಈ ಬಗ್ಗೆ ವೈದ್ಯರ ಜೊತೆಗೆ ಮಾತಕತೆ ನಡೆದಿದ ಸಿಎಂ ಕುಮಾರಸ್ವಾಮಿ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆಯುವುದಾಗಿಯೂ, ಅಲ್ಲಿಯೇ ಚಿಕಿತ್ಸೆ ಪಡೆಯುವುದಾಗಿಯೂ ವೈದ್ಯರು ಹೇಳಿದ್ದರು. ಆದರೆ, ಇದಕ್ಕೆ ವೈದ್ಯರು ಒಪ್ಪಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಮಣಿಪಾಲ್ ಆಸ್ಪತ್ರೆಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಾಗಲು ಆಸ್ಪತ್ರೆಯನ್ನು ಸಂಪರ್ಕಿಸಿದರೆ, ಬೆಡ್ ಇಲ್ಲ ಎಂಬ ಉತ್ತರ ಬಂದಿದೆ.
ಇದೇ ವೇಳೆ ಸಚಿವ ಸುಧಾಕರ್ ಅವರ ಬಳಿಯಲ್ಲಿ ಮಾತನಾಡಿ ಬೆಡ್ ದೊರಕಿಸಲು ಯತ್ನಿಸಿದರೂ ಬೆಡ್ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ. ಆ ಬಳಿಕ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕರೆ ಮಾಡಿದ್ದು, ಅಲ್ಲಿ ಬೆಡ್ ಲಭ್ಯವಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯದ ಮುಂದೆ ಕುಮಾರಸ್ವಾಮಿ ಹಾಜರಾಗಬೇಕಿತ್ತು. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲಿದ್ದಾರೆ. ವಿಚಾರಣೆ ಮುಗಿದ ಬಳಿಕ ಅವರು, ಖಾಸಗಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ತಿಳಿದು ಬಂದಿದೆ.