ಕುಂಭಮೇಳಕ್ಕೆ ಬಂದಿದ್ದ ಯುವತಿಯನ್ನು ಅತ್ಯಾಚಾರ ನಡೆಸಿ, ಚಿಕ್ಕಪ್ಪನಿಂದಲೇ ಬ್ಯ್ಲಾಕ್ ಮೇಲ್ ! - Mahanayaka

ಕುಂಭಮೇಳಕ್ಕೆ ಬಂದಿದ್ದ ಯುವತಿಯನ್ನು ಅತ್ಯಾಚಾರ ನಡೆಸಿ, ಚಿಕ್ಕಪ್ಪನಿಂದಲೇ ಬ್ಯ್ಲಾಕ್ ಮೇಲ್ !

khanpur
14/09/2021

ಕಾನ್ಪುರ: ಕಳೆದ 2 ವರ್ಷಗಳಿಂದ ತನ್ನ ಚಿಕ್ಕಪ್ಪ, ಸಂಚಾರ ಪೊಲೀಸ್ ಕಾನ್ ಸ್ಟೇಬಲ್ ನಿಂದಲೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ 25 ವರ್ಷ ವಯಸ್ಸಿನ ಮಹಿಳೆಯೊಬ್ಬರು ಗಂಗಾನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ.

ಮಿರ್ಜಾಪುರ ಜಿಲ್ಲೆಯ ನಿವಾಸಿಯಾದ ಸಂತ್ರಸ್ತ ಮಹಿಳೆ 2019ರ ಜನವರಿಯಲ್ಲಿ ಕುಂಭ ಮೇಳದಲ್ಲಿ ಭಾಗಿಯಾಗಲು ಆಕೆಯ ಚಿಕ್ಕಪ್ಪ ಕುಟುಂಬ ಸಮೇತ ಅಲಹಾಬಾದ್ ಗೆ ಕರೆಸಿಕೊಂಡಿದ್ದ. ಅಲಹಾಬಾದ್ ನಲ್ಲಿ ತಂಗಿದ್ದ ವೇಳೆ, ಆಕೆಯ ಚಿಕ್ಕಪ್ಪ ಆಕೆಯನ್ನು ಹೊಟೇಲ್ ಗೆ ಕರೆದೊಯ್ದು ನಿದ್ದೆ ಬರುವ ಔಷಧಿಯನ್ನು  ತಂಪು ಪಾನೀಯಕ್ಕೆ ಬೆರೆಸಿ ಆಕೆಗೆ ನೀಡಿದ್ದು, ಆಕೆ ಪ್ರಜ್ಞೆ ತಪ್ಪಿದ ಬಳಿಕ ಅತ್ಯಾಚಾರ ನಡೆಸಿದ್ದಾರೆ.

ಅತ್ಯಾಚಾರದ ವಿಡಿಯೋವನ್ನು ಮಾಡಿದ ಆತ, ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದಾನೆ. ಆತ ಕಳೆದ ಎರಡು ವರ್ಷಗಳಿಂದ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಅಲಹಾಬಾದ್ ಮತ್ತು ಕಾನ್ಪುರದಲ್ಲಿ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದಾನೆ ಇದರಿಂದಾಗಿ ಆಕೆ ಗರ್ಭಿಣಿಯಾಗಿದ್ದು, ಆತ ಗರ್ಭ ನಿರೋಧಕ ಮಾತ್ರೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಆರೋಪಿ ಟ್ರಾಫಿಕ್ ಪೊಲೀಸ್ ಕಾನ್ ಸ್ಟೇಬಲ್ ಹಾಗೂ ಆತನ ಮಗ ಕಾನ್ಪುರದ ಚಕೇರಿ ಪ್ರದೇಶದ ಕೋಣೆಯೊಂದಕ್ಕೆ ಯುವತಿಯನ್ನು ಕರೆದೊಯ್ದು ಬ್ಲ್ಯಾಕ್ ಮೇಲ್ ಮಾಡಲು ಮತ್ತೊಂದು ವಿಡಿಯೋ ಮಾಡಿದ್ದಾರೆ. ಇದಕ್ಕೆ ಆಕೆ ವಿರೋಧಿಸಿದಾಗ ಆಕೆಯನ್ನು ಹೊಡೆದು, ಹೆದರಿಸಿದ್ದಾರೆ. ಈ ವೇಳೆ ಅವರಿಂದ ತಪ್ಪಿಸಿಕೊಂಡ ಯುವತಿ, ಪೊಲೀಸ್ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದ ಬಳಿಕ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಪಿಆರ್ ವಿ ಸಿಬ್ಬಂದಿ ಆಕೆಯನ್ನು ರಕ್ಷಿಸಿದ್ದಾರೆ.

ಇನ್ನೂ ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತೆ ನೀಡಿದ ಹೇಳಿಕೆಯ ನಂತರ ಕಾನ್ಸ್ ಟೇಬಲ್ ನ್ನು ಅಮಾನತು ಮಾಡಿ ಎಂದು ಆದೇಶ ನೀಡಲಾಗಿದ್ದು, ಪೊಲೀಸರು ಆರೋಪಿಯ ವಿರುದ್ಧ ಕ್ರಮ ಜರಗಿಸಲು ಮುಂದಾಗಿದ್ದಾರೆ.

rpi

ಇನ್ನಷ್ಟು ಸುದ್ದಿಗಳು…

ಶಾಕಿಂಗ್ ನ್ಯೂಸ್: ಹಫ್ತಾ ನೀಡಲು ನಿರಾಕರಿಸಿದ ವ್ಯಕ್ತಿಯ ಪತ್ನಿಯ ಮೇಲೆ ರೌಡಿಗಳಿಂದ ಗ್ಯಾಂಗ್ ರೇಪ್

ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿ, ಅಂಗಾಂಗ ಮುಟ್ಟಿ ವಿಕೃತವಾಗಿ ಥಳಿಸಿದ ತಂಡ: ವಿಡಿಯೋ ವೈರಲ್

ನಾಮಪತ್ರ ಸಲ್ಲಿಸಲು ಎಮ್ಮೆ ಏರಿ ಬಂದ ಪಂಚಾಯತ್ ಅಭ್ಯರ್ಥಿ!

ಬಿರಿಯಾನಿ ತಿಂದ ಕೆಲವೇ ಹೊತ್ತಿನಲ್ಲಿ ಬಾಲಕಿ ಸಾವು: 15 ದಿನಗಳ ಹಳೆಯ ಕೋಳಿ ಮಾಂಸದಲ್ಲಿ ಬಿರಿಯಾನಿ ತಯಾರಿಕೆ!

ಪ್ರಾಣ ಸ್ನೇಹಿತರು ಜೊತೆಯಾಗಿ ಪ್ರಾಣ ಬಿಟ್ಟರು: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದು ಪ್ರಾಣಕ್ಕೆ ಕುತ್ತು ತಂದಿತು!

ಅಡಿಕೆ ಬೇಯಿಸುವ ಹಂಡೆಗೆ ಬಿದ್ದು ನಾಲ್ಕು ವರ್ಷ ವಯಸ್ಸಿನ ಬಾಲಕನ ದಾರುಣ ಸಾವು!

ಮಂಗಳ ಗ್ರಹದಲ್ಲಿ ಜೀವಿಗಳಿದ್ದವು ಎನ್ನುವುದಕ್ಕೆ ಸಿಕ್ಕಿದೆ ಬಲವಾದ ಸಾಕ್ಷಿ!

ಇತ್ತೀಚಿನ ಸುದ್ದಿ