ಕುಂಭಾಶಿಯಲ್ಲಿ ಸರಣಿ ಅಪಘಾತ: ಸ್ಕೂಟರ್ ಸವಾರ ಮೃತ್ಯು
ಕುಂದಾಪುರ: ಸರಣಿ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ಮಧ್ಯಾಹ್ನ ವೇಳೆ ನಡೆದಿದೆ.
ಕಾರು, ಬೈಕ್ ಮತ್ತು ಬಸ್ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಸ್ಕೂಟರ್ ಸವಾರ ಕುಂಭಾಶಿ ಹೊಳೆಕಟ್ಟು ಸಮೀಪದ ನಿವಾಸಿ ಪ್ರಶಾಂತ್ ಪೂಜಾರಿ(25) ಎಂಬವರು ಮೃತಪಟ್ಟಿದ್ದಾರೆ. ಸಹಸವಾರ ವಿಘ್ನೇಶ್ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಂಭಾಶಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಸ್ಕೂಟರ್, ರಸ್ತೆಗೆ ಒಮ್ಮೇಲೆ ಅಡ್ಡ ಬಂದ ಕಾರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅದೇ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಕಾರು ಮತ್ತು ಬೈಕ್ ಡಿಕ್ಕಿ ಹೊಡೆಯಿತು. ಇದರ ಮಧ್ಯೆ ಸಿಲುಕಿದ ಸ್ಕೂಟರ್ ಸವಾರ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw