ಕುಂದಾಪುರದ ನಿವಾಸಿ ರಾಘವೇಂದ್ರ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್
06/10/2023
ಕುಂದಾಪುರ: ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್ ಬನ್ಸ್ ರಾಘು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಶುಕ್ರವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ಮೂರು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿ ಆದೇಶಿಸಿದೆ
ಬಂಧಿತರನ್ನು ಶಿವಮೊಗ್ಗ ಮೂಲದ ಶಫಿವುಲ್ಲಾ (40) ಹಾಗೂ ಇಮ್ರಾನ್ (43) ಎಂದು ಗುರುತಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು 2ನೇ ಹೆಚ್ಚುವರಿ ಸಿವಿಲ್ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನೆಲೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಕುಂದಾಪುರ ಠಾಣೆ ನಿರೀಕ್ಷಕ ನಂದಕುಮಾರ್, ಅಪರಾಧ ವಿಭಾಗದ ಪಿಎಸ್ಐ ಪ್ರಸಾದ್, ಪಿಎಸ್ಐ ವಿನಯ್ ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.