ಸಂಬಳದ ಹಣ ಕಳೆದು ಹೋಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾರ್ಮಿಕ! - Mahanayaka

ಸಂಬಳದ ಹಣ ಕಳೆದು ಹೋಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾರ್ಮಿಕ!

death
14/12/2022

ಕುಂದಾಪುರ: ಹಣ ಕಳೆದು ಹೋದ ಚಿಂತೆಯಿಂದ ಮನನೊಂದ ವ್ಯಕ್ತಿಯೋರ್ವರು ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದಲ್ಲಿ ನಡೆದಿದೆ.


Provided by

ಅಂಪಾರು ಗ್ರಾಮದ ನಿವಾಸಿ 42 ವರ್ಷ ಸುರೇಶ್  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮುಳ್ಳುಗುಡ್ಡೆಯ ಸೌಪರ್ಣಿಕ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಸದಾ ಖಿನ್ನತೆಯಿಂದ ಬಳಲುತ್ತಿದ್ದರು.

ಡಿ.13ರಂದು ಸುರೇಶ್ ಕೆಲಸಕ್ಕೆ ರಜೆ ಮಾಡಿ ಕೆಲಸದ ಸಂಬಳ ಹಣ ತರಲು ಕಾರ್ಖಾನೆಗೆ ಹೋಗಿದ್ದರು. ಸಂಜೆ ಮನೆಗೆ ಬಂದು ಸಂಬಳದ ಹಣ ಕಳೆದು ಹೋಯಿತೆಂದು ಚಿಂತೆಗೆ ಒಳಗಾಗಿದ್ದರು.


Provided by

ಇದೇ ಕಾರಣದಿಂದ ಅಂದು ರಾತ್ರಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ