ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ: ವ್ಯಕ್ತಿ ಸಾವು, ಬೈಕ್ ಸವಾರನಿಗೆ ಗಾಯ - Mahanayaka
2:12 PM Thursday 12 - December 2024

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ: ವ್ಯಕ್ತಿ ಸಾವು, ಬೈಕ್ ಸವಾರನಿಗೆ ಗಾಯ

udupi news
15/01/2023

ಕುಂದಾಪುರ: ಕೋಣಿ ಗ್ರಾಮದ ಕಟ್ಕೇರಿಯ ಶಂಕರ ಮಡಿವಾಳರ ಹೊಟೇಲ್ ಬಳಿ ಜ.14ರಂದು ಸಂಜೆ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಚಂದ್ರ ಕುಮಾರ್ ಮೃತ ದುರ್ದೈವಿ. ಪ್ರದೀಪ್ ಎಂಬವರು ಸವಾರಿ ಮಾಡಿ ಕೊಂಡು ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಬೈಕ್, ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಂದ್ರ ಕುಮಾರ್ಗೆ ಡಿಕ್ಕಿ ಹೊಡೆಯಿತು.

ಇದರಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಚಂದ್ರ ಕುಮಾರ್ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಮೃತಪಟ್ಟರು. ಇದೇ ವೇಳೆ ಬೈಕ್ ಪಲ್ಟಿಯಾಗಿ ಗಾಯಗೊಂಡ ಬೈಕ್ ಸವಾರ ಪ್ರದೀಪ್ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ