ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎ ಎಸ್ ಐ ಕುಸಿದುಬಿದ್ದು ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎ ಎಸ್ ಐ ಒಬ್ಬರು ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ.
ತಿಪ್ಪಣ ನಾಗವ್ವ ಮಾದರ (37) ಮೃತ ಎ ಎಸ್ ಐ. ಇವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಬೆರಳುಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದ ಇವರು 2011ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಇಲಾಖೆಗೆ ಸೇರಿದ್ದರು. ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಆರು ತಿಂಗಳ ಹಿಂದೆ ಮುಂಬಡ್ತಿಗೊಂಡು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಎಸ್ ಪಿ ಕಚೇರಿಗೆ ಎ.ಬಿ. ಶೆಟ್ಟಿ ಸರ್ಕಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಎಂ.ವಿ. ಶೆಟ್ಟಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದೇವಸ್ಥಾನಕ್ಕೆ ಆಗಮಿಸಿದ್ದ ಗರ್ಭಿಣಿ ಕುಸಿದು ಬಿದ್ದು ಸಾವು
ಬುದ್ಧಿಮಾಂದ್ಯನ ಮೇಲೆ ಮನಬಂದಂತೆ ಥಳಿಸಿದ ಪಿಎಸ್ ಐ
ಸಾಮಾಜಿಕ ಹೋರಾಟಗಾರ, ನಟ ಚೇತನ್ ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರಕಾರ