ಧ್ವಜಾರೋಹಣ ವೇಳೆ ನಿವೃತ್ತ ಸೈನಿಕ ಕುಸಿದು ಬಿದ್ದು ಸಾವು
15/08/2022
ಕಡಬ: ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ನಿವೃತ್ತ ಸೈನಿಕರೋರ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.
ನಿವೃತ್ತ ಸೈನಿಕ ಗಂಗಾಧರ ಗೌಡ ಮೃತಪಟ್ಟವರಾಗಿದ್ದಾರೆ. ಕುಟ್ರುಪಾಡಿ ಗ್ರಾಮ ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ಧವಾಗುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ.
ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka