ಹಠಾತ್ ಕುಸಿದು ಬಿದ್ದು ಯುವಕ ಸಾವು: ಕಾರುಗಳ ನಡುವೆ ಡಿಕ್ಕಿ, ಇಬ್ಬರಿಗೆ ಗಾಯ

ಬ್ರಹ್ಮಾವರ: ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಮಕ್ಕಿಮನೆ ಅಂಗಡಿ ಎಂಬಲ್ಲಿ ಆ.7ರಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಮಕ್ಕಿಮನೆ ಅಂಗಡಿ ನಿವಾಸಿ 21 ವರ್ಷ ಪ್ರಾಯದ ಚೇತನ ಮೃತದುರ್ದೈವಿ. ಇವರು ಅಂಗವಿಕಲರಾಗಿದ್ದು, ನಿನ್ನೆ ಮಧ್ಯಾಹ್ನ ಊಟ ಮಾಡಿದ ಬಳಿಕ ಹಠಾತ್ ಆಗಿ ಕುಸಿದುಬಿದ್ದು ಅಸ್ವಸ್ಥಗೊಂಡಿದ್ದರು.
ಕೂಡಲೇ ಅವರನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಚೇತನ್ ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರುಗಳ ನಡುವೆ ಅಪಘಾತ : ಇಬ್ಬರಿಗೆ ಗಾಯ
ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಕುಂದಾಪುರ ತಾಲೂಕಿನ 76- ಹಾಲಾಡಿ ಗ್ರಾಮದ ದಾಸನಕಟ್ಟೆ ತಿರುವಿನಲ್ಲಿ ಆ.7ರಂದು ನಡೆದಿದೆ.
ಶೃಂಗೇರಿಯ ಉಷಾ ಸ್ವಾಮಿ ಹಾಗೂ ಅವರ ಅಕ್ಕ ಅನುರಾಧ ಎಂಬವರು ಕಮಲಶಿಲೆಯಿಂದ ಶೃಂಗೇರಿಗೆ ಸ್ಯಾಂಟ್ರೋ ಕಾರಿನಲ್ಲಿ ಕುಂದಾಪುರ –ಆಗುಂಬೆ ರಾಜ್ಯಹೆದ್ದಾರಿಯಲ್ಲಿ ತೆರಳುತ್ತಿದ್ದರು. ಕಾರು ಹಾಲಾಡಿ ಗ್ರಾಮದ ದಾಸನಕಟ್ಟೆ ತಿರುವಿನಲ್ಲಿ ಚಲಿಸುತ್ತಿದ್ದ ವೇಳೆ ಹೈಕಾಡಿ ಕಡೆಯಿಂದ ಬಂದ ಕಾರೊಂದು ಡಿಕ್ಕಿಯಾಗಿದೆ. ಇದರ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಎರಡು ಕಾರುಗಳು ಜಖಂಗೊಂಡಿವೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka