ಭಾರತದ ಕುಸ್ತಿ ಸಂಸ್ಥೆ ಅಧ್ಯಕ್ಷನಿಂದ ಕುಸ್ತಿಪಟುವಿಗೆ ವೇದಿಕೆಯಲ್ಲೇ ಕಪಾಳಮೋಕ್ಷ
ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯ ಮೆಗಾ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ.
ವೇದಿಕೆಯ ಮೇಲೆ ಈ ರೀತಿ ಘಟನೆ ನಡೆದಿರುವುದು ಸ್ಪರ್ಧೆಯ ವೇಳೆ ಕೆಲಕಾಲ ಗದ್ದಲ ಉಂಟಾಯಿತು. ಉತ್ತರಪ್ರದೇಶ ಸೇರಿದಂತೆ ಇತರ ರಾಜ್ಯಗಳ ಆಟಗಾರರು ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡಿದ್ದನ್ನು ತೀವ್ರವಾಗಿ ಪ್ರತಿಭಟಿಸಿದ್ದಾರೆ.
ನಂತರ ಜಾರ್ಖಂಡ್ ಕುಸ್ತಿ ಸಂಸ್ಥೆಯ ಅಧ್ಯಕ್ಷ ಭೋಲಾನಾಥ್ ಸಿಂಗ್ ಮತ್ತು ಇತರರು ಮಧ್ಯಪ್ರವೇಶಿಸಿ ವಿಷಯವನ್ನು ಸಮಾಧಾನಪಡಿಸಿದರು. ದೇಶದ ವಿವಿಧ ರಾಜ್ಯಗಳಿಂದ 800ಕ್ಕೂ ಹೆಚ್ಚು ಕುಸ್ತಿಪಟುಗಳು ಇದರಲ್ಲಿ ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಹಿನ್ನೆಲೆ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ
ಪ್ರೈಮ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ
ರಾಷ್ಟ್ರಭಕ್ತರ ಪ್ರತಿಮೆ ಧ್ವಂಸ; ಪುಂಡರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ
ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದ ಮಂಡಿಸಬೇಡಿ, ಕಾನೂನು ಕ್ರಮಕೈಗೊಳ್ಳಿ: ಸಿಎಂಗೆ ಸಿದ್ದರಾಮಯ್ಯ ಮನವಿ
ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳ ರಕ್ಷಣೆ: ಕೋಟಾ ಶ್ರೀನಿವಾಸ್ ಪೂಜಾರಿ