ನನ್ನ ಕುಟುಂಬದವರು ಪ್ರಧಾನಿ ಆಗಿ 30 ವರ್ಷಗಳಾಗಿವೆ, ಕುಟುಂಬ ರಾಜಕರಣ ಎಂದು ಹೇಗೆ ಹೇಳುತ್ತೀರಿ? | ರಾಹುಲ್ ಗಾಂಧಿ ಪ್ರಶ್ನೆ
ನವದೆಹಲಿ: ಕುಟುಂಬ ರಾಜಕಾರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನನ್ನ ಕುಟುಂಬದವರು ಪ್ರಧಾನಿಯಾಗಿ 30 ವರ್ಷಗಳೇ ಆಗಿವೆ. ಕಳೆದ ಬಾರಿ ಯುಪಿಎ ಸರ್ಕಾರ ಅವಧಿಯಲ್ಲಿ ಬೇರೆಯವರು ಕೂಡ ಪ್ರಧಾನಿ ಆಗಿದ್ದಾರೆ ಇದನ್ನು ಕುಟುಂಬ ರಾಜಕಾರಣ ಎಂದು ಹೇಗೆ ಹೇಳುತ್ತೀರಿ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಚಿಕಾಗೊ ವಿಶ್ವವಿದ್ಯಾಲಯದ ಪ್ರೊಫೆಸರ್ ದೀಪೇಶ್ ಚಕ್ರವರ್ತಿ ಅವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ನನ್ನ ಅಜ್ಜಿ ಇಂದಿರಾ ಗಾಂಧಿ ಹಾಗೂ ತಂದೆ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಲಾಯಿತು ಎಂದು ಹೇಳಲು ನನಗೆ ಹೆಮ್ಮೆಯಾಗುತ್ತದೆ. ಇದರಿಂದ ಅವರನ್ನು ಅರ್ಥ ಮಾಡಿಕೊಳ್ಳಲು ಹಾಗೂ ನನ್ನ ಸ್ಥಾನಮಾನಗಳನ್ನು ಅರಿಯಲು, ಹಾಗೂ ಮುಂದೆ ಏನು ಮಾಡಬೇಕು ಎಂದು ತೀರ್ಮಾನಿಸಲು ಅದು ಸಹಾಯವಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು.
ಸಿದ್ಧಾಂತದ ನೆಲೆಗಟ್ಟಿನಲ್ಲಿ ಹೋರಾಟ ಮುಂದುವರಿದಿದೆ. ಆಲೋಚನೆಗಳು ಯುದ್ಧ ನಡೆಯುತ್ತಿದೆ. ಅವುಗಳು ನನ್ನ ಮೇಲೆ ಆಕ್ರಮಣ ಮಾಡುತ್ತಿದ್ದಂತೆ ಅದು ನನ್ನನ್ನು ನಾನೇ ಪರಿಷ್ಕರಿಸಲು ಸಹಾಯ ಮಾಡುತ್ತದೆ. ಎಂದು ಅವರು, ಟ್ರೋಲ್ ಗಳ ಬಗ್ಗೆ ಪ್ರತಿಕ್ರಿಯಿಸಿ, ಟ್ರೋಲ್ ಗಳು ಮುಂದೆ ನಾನು ಏನು ಮಾಡಬೇಕು ಎಂಬ ಬಗ್ಗೆ ನನಗೆ ಪ್ರಜ್ಞೆ ತುಂಬುತ್ತವೆ. ನಾನು ಏನು ಮಾಡಬೇಕು ಎಂದು ಟ್ರೋಲ್ ಮಾಡುವವರೇ ಬಹುತೇಕ ಮಾರ್ಗದರ್ಶನ ಮಾಡುತ್ತಾರೆ ಎಂದು ಅವರು ಹೇಳಿದರು.