ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ | ನಟ ಚೇತನ್
ಬೆಂಗಳೂರು: ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ಆ ದಿನಗಳು ಖ್ಯಾತಿಯ ನಟ ಚೇತನ್ ಅಭಿಪ್ರಾಯ ಪಟ್ಟಿದ್ದು, ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಕುರಿತು ವಿಮರ್ಶಾತ್ಮಕ ಹೇಳಿಕೆಗಳನ್ನು ನೀಡಿರುತ್ತಿರುವ ಚೇತನ್ ಇದೀಗ ಇಂದಿರಾ ಗಾಂಧಿ ಅವರ ಬಗ್ಗೆ ವಿಮರ್ಶಿಸಿದ್ದಾರೆ.
1959 ರಲ್ಲಿ ಜವಹಾರ್ಲಾಲ್ ನೆಹರೂ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಅವರ ಮಗಳಾದ ಇಂದಿರಾ ಗಾಂಧಿಯವರು ತಮ್ಮದೇ ಆದಂತಹ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ‘ಆಯ್ಕೆಯಾಗಿದ್ದರು’. ಡೈನಸ್ಟ್ ಇಂದಿರಾ ಒಬ್ಬ ಪ್ರಶ್ನಾರ್ಹ ಪ್ರಧಾನಿ ಆಗುತ್ತಾರೆ, ಆ ಮೂಲಕ ಕಾಂಗ್ರೆಸ್ ನ ಕುಟುಂಬ ರಾಜಕೀಯ ಮತ್ತು ಸ್ವಜನ ಪಕ್ಷಪಾತಕ್ಕೆ ಅಡಿಪಾಯ ಹಾಕುತ್ತಾರೆ ಎಂದು ನಟ ಚೇತನ್ ಹೇಳಿದ್ದಾರೆ.
ಕೇವಲ ಕೆಲವು ಗಣ್ಯ ವ್ಯಕ್ತಿಗಳಿಗಷ್ಟೇ ಅಲ್ಲದೇ, ನಮ್ಮೆಲ್ಲರಿಗೂ ನಮ್ಮ ದೇಶವನ್ನು ಕಟ್ಟುವ ಅವಕಾಶ ದೊರಕಬೇಕು ಎಂದು ಅವರು ಕಾಂಗ್ರೆಸ್ ನೊಳಗಿರುವ ಕುಟುಂಬ ರಾಜಕಾರಣದ ಬಗ್ಗೆ ವಿಮರ್ಶಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಯಡಿಯೂರಪ್ಪ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಜರಾತ್ ಸಿಎಂ ವಿಜಯ್ ರೂಪಾನಿ!
ಇನ್ನು ನಾಲ್ಕು ವರ್ಷಗಳಲ್ಲಿ ಮನೆ ಮನೆಗಳಲ್ಲಿ ಆರೆಸ್ಸೆಸ್: ಮೋಹನ್ ಭಾಗವತ್
33 ತಾಸುಗಳ ಜೀವನ್ಮರಣ ಹೋರಾಟದ ಬಳಿಕ ಸಾವಿಗೀಡಾದ ಅತ್ಯಾಚಾರ ಸಂತ್ರಸ್ತೆ!
ಬಿಜೆಪಿ ಆಡಳಿತದಲ್ಲಿಯೇ ದೇವಸ್ಥಾನ ನೆಲಸಮ: ಬೇರೆ ಸರ್ಕಾರ ಇದ್ದಿದ್ದರೆ ನಡೆಯುತ್ತಿದ್ದದ್ದೇ ಬೇರೆ!
ಬೈಕ್ ಸ್ಕಿಡ್ ಆಗಿ ಖ್ಯಾತ ನಟನಿಗೆ ಗಂಭೀರ ಗಾಯ: ಅಪೋಲೊ ಆಸ್ಪತ್ರೆಗೆ ದೌಡಾಯಿಸಿದ ಹಿರಿಯ ನಟರು