ಲಡಾಖ್- ಕಾರ್ಗಿಲ್, ಅರುಣಾಚಲ ಪ್ರದೇಶದಲ್ಲಿ ಭೂಕಂಪನ
ನವದೆಹಲಿ: ಲಡಾಖ್ ಕೇಂದ್ರಾಡಳಿತ ಪ್ರದೇಶದ ದೋಡಾದಲ್ಲಿ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದ್ದು, ಯಾವುದೇ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟದ ವರದಿಯಾಗಿಲ್ಲ.
ಮುಂಜಾನೆ ಸುಮಾರಿಗೆ 2.53ಕ್ಕೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಭೂಕಂಪನಕ್ಕೆ ಒಳಗಾದ ಪ್ರದೇಶ ಕಾರ್ಗಿಲ್ನಿಂದ 169 ಕಿ.ಮೀ. ಉತ್ತರಕ್ಕಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ. ಇದರ ಜೊತೆಗೆ ಮಿಜೋರಾಂನಲ್ಲಿ 5.6ರಷ್ಟು ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅರುಣಾಚಲ ಪ್ರದೇಶದ ದಿಬಾಂಗ್ ಕಣಿವೆಯಲ್ಲೂ ಶುಕ್ರವಾರ ರಾತ್ರಿ 8.48ಕ್ಕೆ ಭೂಕಂಪನ ಸಂಭವಿಸಿದ್ದು, ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಮಾಹಿತಿ ನೀಡಿದೆ. ಪಾಂಜಿನ್ ಜಿಲ್ಲೆಯ ಉತ್ತರಕ್ಕೆ 94 ಕಿ.ಮೀ. ದೂರದಲ್ಲಿ ಭೂಕಂಪ ಸಂಭವಿಸಿದ್ದು, ಈ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಧಾರ್ಮಿಕ ಸಂಕೇತಗಳೂ ಮತಾಧಾರಿತ ಅಸ್ಮಿತೆಯೂ
ಬ್ರೇಕಿಂಗ್ ನ್ಯೂಸ್: ವೀಕೆಂಡ್ ಕರ್ಪ್ಯೂ ರದ್ದು: ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ
ಮಹಿಳೆಯ ಕೊಲೆ ಪ್ರಕರಣ; ಬಿಜೆಪಿ ಕೌನ್ಸಿಲರ್ ಬಂಧನ
ಹಾಡಹಗಲೇ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ