ಲ್ಯಾಂಡಿಂಗ್ ವೇಳೆ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ವಿಮಾನ - Mahanayaka
5:27 AM Thursday 19 - September 2024

ಲ್ಯಾಂಡಿಂಗ್ ವೇಳೆ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ವಿಮಾನ

20/02/2021

ವಿಜಯವಾಡ:  ಪೈಲಟ್ ನಿಯಂತ್ರಣ ಕಳೆದುಕೊಂಡ ವಿಮಾನವೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಆತಂಕಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು,  ವಿಮಾನ  ಲ್ಯಾಂಡ್ ಆಗುತ್ತಿದ್ದಂತೆಯೇ ಈ ಅಪಘಾತ ಸಂಭವಿಸಿದೆ.

ಅಪಘಾತಕ್ಕೊಳಗಾದ  ಏರ್ ಇಂಡಿಯಾ ವಿಮಾನದಲ್ಲಿ  64 ಜನರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್  ಈ ಅಪಘಾತದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಸ್ವಲ್ಪದರಲ್ಲಿಯೇ ಪ್ರಯಾಣಿಕರು ಪಾರಾಗಿದ್ದಾರೆ.

ವಿಜಯವಾಡಅಂತರಾಷ್ಟ್ರೀಯ ವಿಮಾನ ನಿಲ್ದಾಣ ಗಾನ್ನವರಂನಲ್ಲಿ ಈ ಘಟನೆ ನಡೆದಿದೆ.  ವಿಮಾನದಲ್ಲಿದ್ದ 64 ಜನ ಪ್ರಯಾಣಿಕರು ಕೂಡ ಸುರಕ್ಷಿತವಾಗಿದ್ದು, ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವಿಮಾನ ನಿಲ್ದಾಣದ ಡೈರೆಕ್ಟರ್ ಮಧುಸೂಧನ್ ರಾವ್ ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ.


Provided by

ಇತ್ತೀಚಿನ ಸುದ್ದಿ