ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತನಾದ ಬಿಜೆಪಿ ನಾಯಕ | ದೂರು ನೀಡಲು ಮುಂದಾದ ಮತ್ತಷ್ಟು ಮಹಿಳೆಯರು, ಬಾಲಕರು
ಉತ್ತರಪ್ರದೇಶ: ಅಪ್ರಾಪ್ತ ವಯಸ್ಸಿನ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಬಿಜೆಪಿ ಕೊಂಚ್ ಘಟಕದ ಉಪಾಧ್ಯಕ್ಷ ರಾಮ್ ಬಿಹಾರಿ ಇದೀಗ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿಯೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ದೂರು ರಾಮ್ ಬಿಹಾರಿ ವಿರುದ್ಧ ದೂರು ದಾಖಲಾದ ಬಳಿಕ ಈತನ ಒಂದೊಂದೇ ಅಪರಾಧ ಕೃತ್ಯಗಳು ಬೆಳಕಿಗೆ ಬಂದಿವೆ.
ಜಲೌನ್ ಜಿಲ್ಲೆಯ ಕೊಂಚ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ತನ್ನ ಮನೆಯಿಂದ ಈತ ಕ್ರಿಕೆಟ್ ಬೆಟ್ಟಿಂಗ್ ಜಾಲ ನಡೆಸುತ್ತಿದ್ದ, ಈತನ ಕಾಮುಕ ತನಕ್ಕೆ ಹಲವು ಅಪ್ರಾಪ್ತ ವಯಸ್ಸಿನ ಬಾಲಕರು, ಮಹಿಳೆಯರು ಬಲಿಪಶುಗಳಾಗಿದ್ದು, ಈತನ ವಿರುದ್ಧ ಅವರು ಕೂಡ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಜನವರಿ 13ರಂದು ಈತ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಬಂಧಿತನಾದ ಬಳಿಕ, ತಕ್ಷಣವೇ ಬಿಜೆಪಿ ಈತನನ್ನು ಉಚ್ಛಾಟನೆ ಮಾಡಿದೆ. ಈತನನ್ನು ಹೇಗೆ ಕೊಂಚ್ ಘಟಕದ ಉಪಾಧ್ಯಕ್ಷನಾಗಿ ನೇಮಿಸಲಾಯಿತು ಎಂದು ನಾವು ಪರಿಶೀಲಿಸುತ್ತಿದ್ದೇವೆ ಎಂದು ಜಲೌನ್ ಜಿಲ್ಲೆಯ ಬಿಜೆಪಿ ಅಧ್ಯಕ್ಷ ರಾಮೇಂದ್ರ ಸಿಂಗ್ ಹೇಳಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಕೊಂಚ್ ಠಾಣಾಧಿಕಾರಿ ಇಮ್ರಾನ್ ಖಾನ್, ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಸಾಕ್ಷ್ಯ ಗಳನ್ನು ಕಲೆ ಹಾಕುತ್ತಿದ್ದೇವೆ. ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯೂ ಪ್ರಕರಣ ದಾಖಲಿಸುವ ಚಿಂತನೆ ನಡೆಸಿದ್ದೇವೆ