ಲೈಂಗಿಕ ದೌರ್ಜನ್ಯ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಶಿಕ್ಷಕನ ಸಹಿತ ಇಬ್ಬರ ಬಂಧನ! - Mahanayaka
9:03 AM Tuesday 24 - December 2024

ಲೈಂಗಿಕ ದೌರ್ಜನ್ಯ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಶಿಕ್ಷಕನ ಸಹಿತ ಇಬ್ಬರ ಬಂಧನ!

tamilnadu
17/11/2021

ಚೆನ್ನೈ: ಶಿಕ್ಷಕನ ಲೈಂಗಿಕ ದೌರ್ಜನ್ಯದಿಂದ ನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ನಂತರ ಆರೋಪಿ ಶಿಕ್ಷಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಕೊಯಮತ್ತೂರಿನ ಖಾಸಗಿ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಆರೋಪಿ ಶಿಕ್ಷಕ ಕೊವಿಡ್ ಸಂದರ್ಭದಲ್ಲಿ ವಿಶೇಷ ತರಗತಿಯ ನೆಪದಲ್ಲಿ ಕರೆಸಿ ಲೈಂಗಿಕ ದೌರ್ಜನ್ಯ ನಡೆಸಿದ್ದ ಎನ್ನಲಾಗಿದೆ. ಈ ಸಂಬಂಧ ದೂರು ನೀಡಿದರೂ ಪ್ರಾಂಶುಪಾಲರು ಯಾವುದೇ ಕ್ರಮಕೈಗೊಂಡಿಲ್ಲ ಎನ್ನಲಾಗಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಆರೋಪಿ  ಭೌತಶಾಸ್ತ್ರ ಶಿಕ್ಷಕ ಹಾಗೂ ಘಟನೆಯನ್ನು ಮುಚ್ಚಿ ಹಾಕಲು ಯತ್ನಿಸಿದ ಮುಖ್ಯೋಪಾಧ್ಯಾಯಿನಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ.

ಆರೋಪಿ ಶಿಕ್ಷಕ ಮತ್ತಿಬ್ಬರು ವಿದ್ಯಾರ್ಥಿನಿಯರಿಗೂ ಲೈಂಗಿಕ ದೌರ್ಜನ್ಯ ನೀಡಿರುವುದು ಈ ಘಟನೆಯ ಬೆನ್ನಲ್ಲೇ ಬೆಳಕಿಗೆ ಬಂದಿದೆ. ಈ ಸಂಬಂಧ ವಾಟ್ಸಾಪ್ ಚಾಟ್ ಹಾಗೂ ಆಡಿಯೋ ಸಂಭಾಷಣೆ ಮಂಗಳವಾರ ವೈರಲ್ ಆಗಿತ್ತು.  ಈ ಎಲ್ಲ ಬೆಳವಣಿಗೆಗಳ ನಡುವೆಯೇ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಕೂಡ ಹಲವರ ತಲೆದಂಡವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಶಾಕಿಂಗ್ ನ್ಯೂಸ್: 2 ಡೋಸ್ ಕೊವಿಡ್ ಲಸಿಕೆ ಪಡೆದಿದ್ದರೂ ವ್ಯಕ್ತಿ ಕೊರೊನಾಕ್ಕೆ  ಬಲಿ

ವಿಶಾಲ್ ರನ್ನು ನೋಡಿದಾಗ ನನ್ನ ತಮ್ಮನನ್ನು ನೋಡಿದ ಹಾಗೆಯೇ ಆಗುತ್ತದೆ, ಅಪ್ಪು ಬಳಿಯೂ ಇದನ್ನು ಹೇಳಿದ್ದೆ | ಶಿವರಾಜ್ ಕುಮಾರ್

ವಾಯು ಮಾಲಿನ್ಯದಿಂದ ಕಂಗೆಟ್ಟ ದೆಹಲಿ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮದ್ರಸದಿಂದ ಬರುತ್ತಿದ್ದ ಬಾಲಕನ ಮೇಲೆ ಎರಗಿದ ಹುಚ್ಚುನಾಯಿ!

ಪುನೀತ್ ಅವರಿಗೆ ‘ಕರ್ನಾಟಕ ರತ್ನ’ದ ಜೊತೆಗೆ ರಾಷ್ಟ್ರಮಟ್ಟದ ಉನ್ನತ ಗೌರವಕ್ಕೂ ಶಿಫಾರಸು | ಸಿಎಂ ಬಸವರಾಜ್ ಬೊಮ್ಮಾಯಿ

ಒಂದು ಕೆನ್ನೆಗೆ ಹೊಡೆದಾಗ ಇನ್ನೊಂದು ಕೆನ್ನೆ ತೋರಿಸಿದರೆ, ಸಿಗೋದು ಸ್ವಾತಂತ್ರ್ಯ ಅಲ್ಲ, ಭಿಕ್ಷೆ | ಮತ್ತೆ ಕಂಗನಾ ಟೀಕೆ

ಇತ್ತೀಚಿನ ಸುದ್ದಿ