ರಸ್ತೆಯಲ್ಲಿ ಅಡ್ಡನಿಂತು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಗೆ ಧರ್ಮದೇಟು! - Mahanayaka

ರಸ್ತೆಯಲ್ಲಿ ಅಡ್ಡನಿಂತು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಗೆ ಧರ್ಮದೇಟು!

raaichuru crime news
31/07/2021

ರಾಯಚೂರು: ರಸ್ತೆಯಲ್ಲಿ ಹೋಗುತ್ತಿರುವ ಮಹಿಳೆಯರ ಸೀರೆ ಎಳೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು, ಬಳಿಕ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ರೋಡಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಅಡ್ಡ ನಿಂತು ಸೀರೆ ಎಳೆಯಲು ಪ್ರಯತ್ನಿಸುತ್ತಿದ್ದ ಎಂದು ಹೇಳಲಾಗಿದೆ. ಈತನ ಕೃತ್ಯವನ್ನು ಗಮನಿಸಿದ ಸ್ಥಳೀಯರು ಆತನನ್ನು ಪ್ರಶ್ನಿಸಿದ್ದು, ಬಳಿಕ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ವ್ಯಕ್ತಿಯು ಈ ಪ್ರದೇಶಕ್ಕೆ ಅಪರಿಚಿತನಾಗಿದ್ದು, ರಸ್ತೆಯಲ್ಲಿ ಮಹಿಳೆಯರು ನಡೆದುಕೊಂಡು ಬರುವ ವೇಳೆ ಅವರ ಹಿಂದೆಯೇ ನಡೆಯುತ್ತಾ ಸೀರೆಯನ್ನು ಎಳೆಯಲು ಯತ್ನಿಸುತ್ತಿದ್ದ ಎಂದು ತಿಳಿದು ಬಂದಿದೆ. ಈ ವೇಳೆ ಮಹಿಳೆಯರು ಈತನಿಗೆ ಹೆದರಿ ಓಡಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ವ್ಯಕ್ತಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೀಗ ಪಶ್ಚಿಮ ಠಾಣೆ ಪೊಲೀಸರು ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸುದ್ದಿಗಳು…

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನನ್ನು ಭೀಕರವಾಗಿ ಕೊಂದ ಕಾಡು ಪ್ರಾಣಿ!

ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ರಕ್ತದಾನ ಮಾಡಿದ 75 ಪೊಲೀಸರು

ಬಿಜೆಪಿಗೆ ಬಂದ 17 ಶಾಸಕರಿಗೆ ಬಿಗ್ ಶಾಕ್ ನೀಡಿದ ಮಾಜಿ ಸಿಎಂ ಯಡಿಯೂರಪ್ಪ!

ವಿಚ್ಛೇದನದ ಬಳಿಕ ಜೊತೆಯಾಗಿ ಒಂದೇ ಮನೆಯಲ್ಲಿ ವಾಸಿಸುತ್ತಿದ್ದ ಸಹೋದರಿಯರ ಬರ್ಬರ ಹತ್ಯೆ!

46.1 ಲಕ್ಷ ಮೊಬೈಲ್ ಬಳಕೆದಾರರನ್ನು ಕಳೆದುಕೊಂಡ ಏರ್ ಟೆಲ್!

ಕೋಳಿ ಆಹಾರ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ | ಕಾರ್ಯಾಚರಣೆಗೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗೂ ಗಂಭೀರ ಗಾಯ

ಇತ್ತೀಚಿನ ಸುದ್ದಿ