ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು
ಅಲಹಾಬಾದ್: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಪೀಠ ಗುರುವಾರ ಜಾಮೀನು ಮಂಜೂರು ಮಾಡಿದೆ.
ಕಳೆದ ವರ್ಷ ಅ. 3ರಂದು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಲಖೀಂಪುರ್ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್ ಮಿಶ್ರಾ ಹಾಗೂ ಅವರ ಬೆಂಗಾವಲು ಪಡೆಯ ವಾಹನಗಳು ಚಲಿಸಿದ್ದವು. ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದರು.
ಈ ಘಟನೆ ಹೇಳಿಕೆ ನೀಡಿದ್ದ ವಿಶೇಷ ತನಿಖಾ ತಂಡ, ಲಖಿಂಪುರ ಖೇರಿ ಹಿಂಸಾಚಾರ ಪೂರ್ವಯೋಜಿತ ಎಂದು ಹೇಳಿತ್ತು. ಅಲ್ಲದೆ, ಅಜಯ್ ಮಿಶ್ರಾ ಪುತ್ರ ಅಶೀಶ್ ಮಿಶ್ರಾ ಪ್ರಮುಖ ಆರೋಪಿ ಎಂದು ಘೋಷಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವವರ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279, 338 ಹಾಗೂ 340 ಎ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದರ ಬದಲಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಬೇಕು ಎಂದು ಎಸ್‌ಐಟಿ ವಿನಂತಿ ಮಾಡಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಭೀಕರ ಅಪಘಾತ: ಮಾಜಿ ಶಾಸಕ ಎಸ್.ಬಾಲರಾಜು ಸೇರಿ ಮೂವರಿಗೆ ಗಾಯ
ಮುಸ್ಲಿಮ್ ಮಹಿಳೆಯರ ಮೇಲಿನ ಶೋಷಣೆ ತಡೆಯಬೇಕಿದೆ | ಪ್ರಧಾನಿ ಮೋದಿ
ಹಿಜಾಬ್ -ಕೇಸರಿ ಶಾಲು ವಿವಾದ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ
ಅಭಿವೃದ್ಧಿಯ ಹರಿಕಾರ ಪ್ರೀತಂ ಗೌಡ ಅವರಿಗೆ ಸಚಿವ ಸ್ಥಾನ ನೀಡಿ: ಯುವ ಬಿಜೆಪಿ ಮುಖಂಡ ಲಿಖಿತ್ ಗೌಡ ಒತ್ತಾಯ
ಹಿಜಬ್-ಕೇಸರಿ ವಿವಾದ: ಶಾಲೆಗಳು ಧರ್ಮ ಪ್ರದರ್ಶನದ ಸ್ಥಳವಲ್ಲ; ನಟಿ ಖುಷ್ಬೂ